Home ಬ್ರೇಕಿಂಗ್ ಸುದ್ದಿ ನನ್ನ ಮತ್ತು ಡಿಕೆಶಿ ನಡುವೆ ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮೋತ್ಸವದಲ್ಲಿ ಸಿದ್ದು ಗುಟುರು

ನನ್ನ ಮತ್ತು ಡಿಕೆಶಿ ನಡುವೆ ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮೋತ್ಸವದಲ್ಲಿ ಸಿದ್ದು ಗುಟುರು

0

ದಾವಣಗೆರೆ: “ನಾನು ಮತ್ತು ಡಿ.ಕೆ.ಶಿವಕುಮಾರ್ ಒಗ್ಗಟ್ಟಾಗಿದ್ದೇವೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರ‍್ರಾಯವಿಲ್ಲ. ನಮ್ಮ ಮಧ್ಯೆ ಬಿರುಕಿದೆ ಎಂದು ಬಿಜೆಪಿಯವರು ಬಿಂಬಿಸಿದ್ದಾರೆ. ನಾನು ನನ್ನ ಕೊನೆಯ ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿರುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಇಂದು ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

‘ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಭ್ರಷ್ಟ, ಕೊಮುವಾದಿ ಮತ್ತು 40% ಕಮಿಷನ್ ಸರ್ಕಾರವು ನಾಡಿನ ಜನತೆಗೆ ದ್ರೋಹ ಬಗೆಯುತ್ತಿದೆ. ಅದನ್ನು ಕಿತ್ತೊಗೆಯಲು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಅದಕ್ಕೆ ಜನಶಕ್ತಿಯೇ ಬಹಳ ದೊಡ್ಡದು, ಜನರ ನಿರಂತರವಾದ ಪ್ರೀತಿ, ಆರ್ಶೀವಾದದಿಂದ ನಾವು ಮತ್ತೊಮ್ಮೆ ಸರ್ಕಾರ ರಚಿಸುತ್ತೇವೆ’ ಎಂದು ಹೇಳಿದರು.

‘ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ರೈತರು, ಯುವಕರು ಧೈರ್ಯವಾಗಿ ಮುನ್ನಡೆಯಬೇಕು. ಮೋದಿ ಸರ್ಕಾರವು ಸಂವಿಧಾನವನ್ನು ಅಲ್ಲಗಳೆಯುತ್ತಿದೆ; ದೇಶದ ಆರ್ಥಿಕ ಸ್ಥಿತಿಯನ್ನೆಲ್ಲ ಮೇಲೆ-ಕೆಳಗೆ ಮಾಡಿ ಯುವಕರನ್ನು ಭ್ರಷ್ಟರನ್ನಾಗಿ ಮಾಡಿದೆ; ರೈತ ವಿರೋಧಿ ಕಾನೂನುಗಳನ್ನು ತಂದು ದೇಶದ ಜನತೆಗೆ ದ್ರೋಹ ಬಗೆಯುತ್ತಿದೆೆ; ಬಿಜೆಪಿ ಸರ್ಕಾರ ಸಂವಿಧಾನಕ್ಕೆ ಯಾವುದೇ ರಕ್ಷಣೆ ಮಾಡುತ್ತಿಲ್ಲ. ಈ ಸರ್ಕಾರವನ್ನು ಕಿತ್ತೊಗೆದು, ಕಾಂಗ್ರೆಸ್ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಬೇಕು’ ಎಂದು ಸಿದ್ದರಾಮಯ್ಯ ಹೇಳಿದರು.

ಮುಂಬರುವ 2023ರ ವಿಧಾನಸಭೆ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವನ್ನು ಸಾಧಿಸಲು ನಿಮ್ಮೆಲ್ಲರ ಸಹಕಾರ ಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

You cannot copy content of this page

Exit mobile version