Home ದೇಶ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ಪ್ರಧಾನಿಯಾಗಿ ಸತತ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

0

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶ ವಿದೇಶಗಳ ಅನೇಕ ಗಣ್ಯರು ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾದರು.

ಉಪ ರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ನೇಪಾಳಿ ಪ್ರಧಾನಿ ಪುಷ್ಪ ಕಮಲ್ ದಹಲ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.

You cannot copy content of this page

Exit mobile version