Home ದೇಶ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, SP ನಾಯಕ ಮುಲಾಯಂ ಸಿಂಗ್‌ ನಿಧನ: ಪ್ರಧಾನಿ ಸಂತಾಪ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, SP ನಾಯಕ ಮುಲಾಯಂ ಸಿಂಗ್‌ ನಿಧನ: ಪ್ರಧಾನಿ ಸಂತಾಪ

0

ಸಮಾಜವಾದಿ ಪಕ್ಷದ ಹಿರಿಯ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್‌ ಯಾದವ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಮುಲಾಯಂ ಸಿಂಗ್ ಯಾದವ್ ಅವರ ನಿಧನವು ನನಗೆ ನೋವು ತಂದಿದೆ; ಅವರು ಗಮನಾರ್ಹ ವ್ಯಕ್ತಿತ್ವ ಹೊಂದಿದ್ದರು ಮತ್ತು ಈ ನೆಲದ ನಾಯಕರಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದರು,” ಎಂದಿದ್ದಾರೆ

ಇನ್ನೊಂದು ಟ್ವೀಟಿನಲ್ಲಿ,”ಶ್ರೀ ಮುಲಾಯಂ ಸಿಂಗ್ ಯಾದವ್ ಅವರು ಅದ್ಭುತ ವ್ಯಕ್ತಿತ್ವ ಹೊಂದಿದ್ದರು. ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಅವರು ವಿನಮ್ರ ಮತ್ತು ನೆಲಮೂಲದ ನಾಯಕರಾಗಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟವರು. ಅವರು ಶ್ರದ್ಧೆಯಿಂದ ಜನರಿಗೆ ಸೇವೆ ಸಲ್ಲಿಸಿದರು ಮತ್ತು ಲೋಕನಾಯಕ್ ಜೆಪಿ ಮತ್ತು ಡಾ. ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು,” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಹಿರಿಯ ನಾಯಕರಾಗಿದ್ದ ಮುಲಾಯಂ ಸಿಂಗ್‌ ಯಾದವ್‌ ಅವರ ನಿಧನದ ಹಿನ್ನೆಲೆಯಲ್ಲಿ ಹಲವು ಗಣ್ಯರು ತಮ್ಮ ಸಂತಾಪಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಮುಲಾಯಂ ಸಿಂಗ್‌ ಯಾದವ್‌ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಾ ಪ್ರಧಾನಿ ಅಗಲಿದ ನಾಯಕನೊಂದಿಗೆ ಕಳೆದ ಕೆಲವು ಕ್ಷಣಗಳನ್ನು ಪ್ರತಿಬಿಂಬಿಸುವ ಹಲವು ಫೋಟೊಗಳನ್ನು ಸಹ ತಮ್ಮ ಟ್ವೀಟಿನಲ್ಲಿ ಹಂಚಿಕೊಂಡಿದ್ದಾರೆ.

You cannot copy content of this page

Exit mobile version