ಸುನಿತಾ ವಿಲಿಯಮ್ಸ್‌ ಭೂಮಿಗೆ ಹಿಂದಿರುಗುವ ದಿನಾಂಕ ಪ್ರಕಟಿಸಿದ ನಾಸಾ

ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್ಎಸ್) ಒಂಭತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರು ಅಮೆರಿಕದ ಸ್ಥಳೀಯ ಕಾಲಮಾನ ಮಂಗಳವಾರ ಸಂಜೆ 5.57ಕ್ಕೆ ಭೂಮಿಗೆ ವಾಪಾಸ್ಸಾಗಲಿದ್ದಾರೆ ಎಂದು ನಾಸಾ ತಿಳಿಸಿದೆ.

ಸ್ಪೇಸ್ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ರಾಫ್ಟ್‌ನಲ್ಲಿ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರನ್ನು ಭೂಮಿಗೆ ವಾಪಾಸ್ಸು ಕರೆತರಲಾಗುತ್ತಿದೆ. ಈಗಾಗಲೇ ಸ್ಪೇಸ್ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ರಾಫ್ಟ್‌ ರವಿವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಪ್ರವೇಶಿಸಿದೆ. ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ನಾಸಾ ಈ ಕುರಿತು ಪೋಸ್ಟ್ ಮಾಡಿದ್ದು, ಗಗನಯಾತ್ರಿಗಳನ್ನು ಯಶಸ್ವಿಯಾಗಿ ಭೂಮಿಗೆ ಕರೆತರುವ ಕೆಲಸ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್) ಆರಂಭವಾಗಿದೆ ಎಂದು ನಾಸಾ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು