ಮುಂಬೈ: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನ್ಯಾಯಾಲಯವೊಂದು ಸಮನ್ಸ್ ಜಾರಿ ಮಾಡಿದೆ.
ನಾಸಿಕ್‌ನ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್, ದೀಪಾಲಿ ಪರಿಮಳ್ ಕಡುಸ್ಕರ್ ಅವರು ಸೆಪ್ಟೆಂಬರ್ 27 ರಂದು ರಾಹುಲ್ ಗಾಂಧಿಗೆ ಪ್ರಕ್ರಿಯೆ (ಸಮನ್ಸ್/ನೋಟೀಸ್) ಹೊರಡಿಸಿ, “ದೇಶಭಕ್ತ ವ್ಯಕ್ತಿಯ ವಿರುದ್ಧ ಮಾಡಿದ ಹೇಳಿಕೆಯು ಮೇಲ್ನೋಟಕ್ಕೆ ಮಾನಹಾನಿಕರವಾಗಿದೆ” ಎಂದು ಹೇಳಿದ್ದಾರೆ.