ಅರಸೀಕೆರೆ ಸಿಂಗಟಗೆರೆಯ ನವೀನ್‌ಕುಮಾರ್ ಹೃದಯಾಘಾತಕ್ಕೆ ಬಲಿ

ಹಾಸನ :  ಜಿಲ್ಲೆ ಮೂಲದ ಅರಣ್ಯ ಪಾಲಕರೊಬ್ಬರು ತುಮಕೂರು ಜಿಲ್ಲೆಯ ಬುಕಾ ಪಟ್ಟಣದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅರಸೀಕೆರೆ ತಾಲ್ಲೂಕಿನ ಸಿಂಗಟಗೆರೆ ಗ್ರಾಮದ ನವೀನ್‌ಕುಮಾರ್ (32) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು ಸಕಲೇಶಪುರ ತಾಲ್ಲೂಕಿನ ಯಸಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಬುಕಾಪಟ್ಟಣ ರೇಂಜ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರು, ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದರಾದರೂ, ಅಷ್ಟರಲ್ಲಿ ಹೃದಯಾಘಾತದಿಂದ ನವೀನ್‌ಕುಮಾರ್ ಕೊನೆಯುಸಿರೆಳೆದಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಕುಟುಂಬಸ್ಥರು ಶೋಕ ವ್ಯಕ್ತಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು