Thursday, October 17, 2024

ಸತ್ಯ | ನ್ಯಾಯ |ಧರ್ಮ

ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮ*ಹತ್ಯೆ: ಒಂದೇ ವರ್ಷದಲ್ಲಿ 15ನೇ ಪ್ರಕರಣ

ಉನ್ನತ ವ್ಯಾಸಂಗ ಮತ್ತು ಉದ್ಯೋಗ ತರಬೇತಿಗೆ ಹೆಸರುವಾಸಿಯಾಗಿರುವ ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ ಮುಂದುವರಿದಿದೆ.

ಇಲ್ಲಿ ಈಗಾಗಲೇ ಹಲವು ವಿದ್ಯಾರ್ಥಿಗಳು ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಿರುವ ಸಂಗತಿ. ಇದೀಗ ಇತ್ತೀಚೆಗಷ್ಟೇ ಮತ್ತೊಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಉತ್ತರ ಪ್ರದೇಶದ ಮಿರ್ಜಾಪುರದ 20 ವರ್ಷದ ಅಶುತೋಷ್ ಚೌರಾಸಿಯಾ NEET ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ. ಕೋಟಾದ ದಾದಾಬರಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾಸ್ಟೆಲ್ಲಿನಲ್ಲಿದ್ದುಕೊಂಡು ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಇದೇ ವೇಳೆ ಬುಧವಾರ ಎಷ್ಟು ಬಾರಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪೋಷಕರು ಪಿಜಿ ಮಾಲೀಕರನ್ನು ಸಂಪರ್ಕಿಸಿದ್ದಾರೆ. ಇದಾದ ಬಳಿಕ ಮಾಲಿಕರು ಅಶುತೋಷ್ ತಂಗಿದ್ದ ಕೊಠಡಿಗೆ ಹೋಗಿ ಬಾಗಿಲು ಬಡಿದರು.. ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದುದರಿಂದ ಅನುಮಾನಗೊಂಡು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರಾತ್ರಿ 11:30ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೊಠಡಿಯ ಬಾಗಿಲು ಒಡೆದು ನೋಡಿದಾಗ, ಆಶುತೋಷ್‌ ಶವವಾಗಿರುವುದು ಕಂಡುಬಂತು. ವಿದ್ಯಾರ್ಥಿ ಸಾವನ್ನಪ್ಪಿದ ತಕ್ಷಣ ಆತನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಯಿತು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಇತ್ತೀಚಿನ ಘಟನೆಯೊಂದಿಗೆ ಕೋಟಾದಲ್ಲಿ ಈ ವರ್ಷ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 15ಕ್ಕೆ ತಲುಪಿದೆ ಎಂಬುದು ಗಮನಾರ್ಹ. ಕಳೆದ ವರ್ಷ 30 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆ ತಡೆ ಸಹಾಯವಾಣಿ. ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ ಇಂತಿದೆ 080 – 25497777.

Related Articles

ಇತ್ತೀಚಿನ ಸುದ್ದಿಗಳು

You cannot copy content of this page