ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕೆಂದು ಆಗ್ರಹಿಸಿ ಬುಧವಾರ ದೇಶದ ಹಲವು ರಾಜ್ಯಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಮತ್ತು ವಿಪಕ್ಷಗಳು ಪ್ರತಿಭಟನೆ ನಡೆಸಿದವು.
ಜಂತರ್ ಮಂತರ್‌ನಲ್ಲಿ ಸಿಜೆಪಿ ಬುಧವಾರವೂ ತನ್ನ ಧರಣಿಯನ್ನು ಮುಂದುವರಿಸಿತು. ಆದರೆ ಧರಣಿ ಸ್ಥಳದಲ್ಲಿ ಬುಧವಾರ ರಾತ್ರಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆಯಿತು. ಸಿಜೆಪಿ ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಿದಾಗ, ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.
ಕೆಲವರು ಕೋಲುಗಳನ್ನು ಹಿಡಿದು ಭದ್ರತಾ ಸಿಬ್ಬಂದಿಯ ಮೇಲೆ ದಾಳಿ ನಡೆಸುತ್ತಿರುವ ದೃಶ್ಯಗಳು ವೈರಲ್ ಆಗಿವೆ. ಬಿಹಾರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸೋರಿಕೆಗೆ ಕಾರಣರಾದವರನ್ನು ಶಿಕ್ಷಿಸಬೇಕು ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೀಹಾರ, ಯುಪಿ, ಮಧ್ಯಪ್ರದೇಶ, ಛತ್ತೀಸ್‌ಗಢ, ಗುಜರಾತ್, ಮಹಾರಾಷ್ಟ್ರ ಮತ್ತು ಪಂಜಾಬ್ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಹಾರದ ಪಟ್ನಾದಲ್ಲಿ ಲೋಕ್ ಭವನದತ್ತ ಮೆರವಣಿಗೆ ನಡೆಸಲು ಯತ್ನಿಸಿದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಲಾಯಿತು ಹಾಗೂ ವಾಟರ್ ಕ್ಯಾನನ್ ಮತ್ತು ಅಶ್ರುವಾಯು ಪ್ರಯೋಗಿಸಲಾಯಿತು. ಮಹಾರಾಷ್ಟ್ರದ ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಎಳೆದೊಯ್ದು ವಾಹನಗಳಿಗೆ ಹತ್ತಿಸಿದರು.
