Home ಬ್ರೇಕಿಂಗ್ ಸುದ್ದಿ NEET – PG ಪರೀಕ್ಷೆ ಮುಂದೂಡಿಕೆ : ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ

NEET – PG ಪರೀಕ್ಷೆ ಮುಂದೂಡಿಕೆ : ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ

0

ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಯ ಬಗ್ಗೆ ಇತ್ತೀಚಿನ ತೀವ್ರ ಆರೋಪಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 23ರ ಭಾನುವಾರ ನಡೆಯಬೇಕಿದ್ದ NEET – PG ಪ್ರವೇಶ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ನಡೆಸುವ NEET-PG ಪ್ರವೇಶ ಪರೀಕ್ಷೆಯ ಪ್ರಕ್ರಿಯೆಗಳ ದೃಢತೆಯ ಸಂಪೂರ್ಣ ಮೌಲ್ಯಮಾಪನವನ್ನು ಕೈಗೊಳ್ಳಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ ಎಂದು ಇಲಾಖೆ ಹೇಳಿದೆ.

“ಮುಂಜಾಗ್ರತಾ ಕ್ರಮವಾಗಿ ಭಾನುವಾರ 23ನೇ ಜೂನ್ 2024 ರಂದು ನಡೆಯಲಿರುವ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ” ಎಂದು ಸಚಿವಾಲಯ ತಿಳಿಸಿದೆ.

ಪರೀಕ್ಷೆಯ ಹೊಸ ದಿನಾಂಕವನ್ನು ಆದಷ್ಟು ಬೇಗ ತಿಳಿಸಲಾಗುವುದು ಎಂದು ಅದು ಹೇಳಿದೆ.

“ಆರೋಗ್ಯ ಸಚಿವಾಲಯವು ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗಾಗಿ ಪ್ರಾಮಾಣಿಕವಾಗಿ ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಸಚಿವಾಲಯ ತಿಳಿಸಿದೆ.

You cannot copy content of this page

Exit mobile version