Saturday, September 20, 2025

ಸತ್ಯ | ನ್ಯಾಯ |ಧರ್ಮ

ಕೋಟಾದಲ್ಲಿ ಮತ್ತೋರ್ವ NEET ವಿದ್ಯಾರ್ಥಿ ಆತ್ಮಹತ್ಯೆ, ಈ ವರ್ಷದ 25ನೇ ಪ್ರಕರಣ..

NEET: ನ್ಯಾಷನಲ್‌ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್‌ ಟೆಸ್ಟ್ (NEET) ವಿದ್ಯಾರ್ಥಿಗಳ ಆತ್ಮಹತ್ಯೆ ನಿಲ್ಲುತ್ತಿಲ್ಲ. ಅಧ್ಯಯನದ ಒತ್ತಡ ಮತ್ತು ಪೋಷಕರ ಕನಸುಗಳನ್ನು ನನಸಾಗಿಸಲು ಸಾಧ್ಯವಾಗದ ಭಯವು ಅನೇಕ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾಗುತ್ತಿದೆ.

ರಾಜಸ್ಥಾನದ ಕೋಟಾದಲ್ಲಿ ಈಗಾಗಲೇ ಹಲವು ಮಕ್ಕಳು ಬಲವಂತದ ಸಾವಿಗೆ ಗುರಿಯಾಗಿದ್ದಾರೆ. ಕೋಟ ನಗರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವುದು ಬೇಸರದ ಸಂಗತಿ.

ಈ ವರ್ಷ ಇದುವರೆಗೆ 25 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇವಲ 8 ತಿಂಗಳಲ್ಲಿ ಇಷ್ಟೊಂದು ಮಂದಿ ಆತ್ಮಹತ್ಯೆಗೆ ಶರಣಾಗಿರುವುದು ನೋವು ತರುವ ಸಂಗತಿಯಾಗಿದೆ.

ಈಗಿನ ಪ್ರಕರಣದಲ್ಲಿ ರಾಂಚಿಯ 16 ವರ್ಷದ ವಿದ್ಯಾರ್ಥಿ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಈ ವಿದ್ಯಾರ್ಥಿಯು ಕೋಟಾದ ಬ್ಲೇಜ್ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಪ್ರತಿ ವರ್ಷ ಸುಮಾರು 2 ಲಕ್ಷ ವಿದ್ಯಾರ್ಥಿಗಳು NEET ಪರೀಕ್ಷೆಗೆ ಅರ್ಹತೆ ಪಡೆಯಲು ಕೋಟಾಕ್ಕೆ ಬರುತ್ತಾರೆ.

ರಾಜಸ್ಥಾನ ಪೊಲೀಸರ ಪ್ರಕಾರ, 2022ರಲ್ಲಿ 15, 2019ರಲ್ಲಿ 18, 2018ರಲ್ಲಿ 20, 2017ರಲ್ಲಿ 7, 2016 ರಲ್ಲಿ 17 ಮತ್ತು 2015ರಲ್ಲಿ 18 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2020 ಮತ್ತು 2021ರಲ್ಲಿ ಒಬ್ಬ ವಿದ್ಯಾರ್ಥಿಯೂ ಆತ್ಮಹತ್ಯೆ ಮಾಡಿಕೊಂಡಿಲ್ಲ.

ಈ ಎರಡು ವರ್ಷಗಳಲ್ಲಿ ಕೋವಿಡ್‌ನಿಂದಾಗಿ ಕೋಟಾದ ಎಲ್ಲಾ ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಲಾಗಿತ್ತು ಹೀಗಾಗಿ ಯಾವುದೇ ಆತ್ಮಹತ್ಯೆಗಳು ನಡೆದಿಲ್ಲ.

ಇತ್ತೀಚೆಗೆ ಹೆಚ್ಚುತ್ತಿರುವ ಆತ್ಮಹತ್ಯೆಗಳಿಂದಾಗಿ ಕೋಟಾದ ಹಾಸ್ಟೆಲ್‌ಗಳಲ್ಲಿ ಸೀಲಿಂಗ್ ಫ್ಯಾನ್‌ಗಳಿಗೆ ಸ್ಪ್ರಿಂಗ್‌ಗಳನ್ನು ಜೋಡಿಸಲಾಗಿದೆ. ಪೇಯಿಂಗ್ ಗೆಸ್ಟ್ ವಸತಿಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಆತ್ಮಹತ್ಯೆ ತಡೆಯಲು ಮಾನಸಿಕ ಒತ್ತಡ ಕಡಿಮೆ ಮಾಡಲು ಮಕ್ಕಳಿಗೆ ಬೆಂಬಲ ನೀಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಹೆಚ್ಚುತ್ತಿರುವ ಆತ್ಮಹತ್ಯೆಗಳನ್ನು ತಡೆಯಲು ಶಿಫಾರಸುಗಳನ್ನು ಮಾಡುವಂತೆ ರಾಜಸ್ಥಾನ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page