Monday, July 1, 2024

ಸತ್ಯ | ನ್ಯಾಯ |ಧರ್ಮ

ಇಂದಿನಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ

ದೇಶದಾದ್ಯಂತ ಇಂದಿನಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿವೆ. ಭಾರತೀಯ ನ್ಯಾಯ ಸಂಹಿತೆ, ಭಾರತೀಯ ವಿಪತ್ತು ನಿರ್ವಹಣಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಸಂಹಿತೆ ಜುಲೈ 1 ರಿಂದ ಜಾರಿಗೆ ಬರಲಿದೆ.

ಇದರ ಜೊತೆಗೆ ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಪ್ರಮುಖ ವೈಶಿಷ್ಟ್ಯಗಳ ಬಗ್ಗೆ ತಿಳಿಸಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಬ್ರಿಟೀಷರ ಕಾಲದಿಂದ ಬಂದ IPC – ಭಾರತೀಯ ದಂಡ ಸಂಹಿತೆ, CrPC – ಭಾರತೀಯ ವಿಪತ್ತು ನಿರ್ವಹಣಾ ಕಾಯಿದೆ, ಭಾರತೀಯ ಸಾಕ್ಷಿ ಕಾಯಿದೆಗಳು ಕೆಲವು ಸಣ್ಣಪುಟ್ಟ ಮಾರ್ಪಾಡುಗಳ ಜತೆಗೆ ಈಗ ಹೊಸ ಹೆಸರಿನೊಂದಿಗೆ ಇನ್ನುಮುಂದೆ ಜಾರಿಗೆ ಬರಲಿದೆ.

ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷವೇ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆಯನ್ನೂ ಸಹ ಪಡೆಯಲಾಗಿತ್ತು. ಆದರೆ, ಅವು ಜಾರಿಗೆ ಬಂದಿರಲಿಲ್ಲ.

ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು. ಭಾರತೀಯ ಸಾಕ್ಷ್ಯ ಅಧಿನಿಯಮ. ಈ ಅಧಿನಿಯಮವನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ ಮತ್ತು ಈ ಅಧಿನಿಯಮದ ಅಡಿಯಲ್ಲಿ ಒಟ್ಟು 11 ಅಧ್ಯಾಯಗಳಿವೆ ಎಂದು ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು