ಬೆಂಗಳೂರು : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಬ್ಯಾಂಕಿಂಗ್ ವ್ಯವಸ್ಥೆಯನ್ನು ಮತ್ತಷ್ಟು ಸರಳ ಹಾಗೂ ಸುರಕ್ಷಿತಗೊಳಿಸಲು ಆಗಸ್ಟ್ 1ರಿಂದ ಹೊಸ ಕೆವೈಸಿ (KYC) ನಿಯಮಗಳನ್ನು ಜಾರಿಗೆ ತರುತ್ತಿದೆ.
ಗ್ರಾಹಕರು ಬ್ಯಾಂಕ್‌ಗಳಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಲು ಮತ್ತು ವಂಚನೆಗಳನ್ನು ತಡೆಯಲು ಈ ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.
ಹೊಸ ವ್ಯವಸ್ಥೆಯ ಪ್ರಕಾರ, ನಿಮ್ಮ ವಿಳಾಸದಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೆ ಬ್ಯಾಂಕ್ ಶಾಖೆಗೆ ತೆರಳುವ ಅಗತ್ಯವಿರುವುದಿಲ್ಲ. ಇಮೇಲ್, SMS ಅಥವಾ ಆನ್‌ಲೈನ್ ಪೋರ್ಟಲ್ ಮೂಲಕ ಸರಳ ಸ್ವಯಂ ಘೋಷಣೆ (Self-Declaration) ಸಲ್ಲಿಸಿ KYC ನವೀಕರಿಸಬಹುದು. ಹಿರಿಯ ನಾಗರಿಕರಿಗೆ ಮನೆಬಾಗಿಲಲ್ಲೇ ಸೇವೆ ಸಿಗಲಿದ್ದು, ವೀಡಿಯೋ KYC ಮತ್ತು ಡಿಜಿಲಾಕರ್ ಬಳಕೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ.
KYC ಅವಧಿ ಮುಗಿಯುವ ಮುನ್ನ ಬ್ಯಾಂಕ್‌ಗಳು ಗ್ರಾಹಕರಿಗೆ ಕಡ್ಡಾಯವಾಗಿ ಮುನ್ಸೂಚನೆ ನೀಡಲಿವೆ. ಹೀಗಾಗಿ ಬ್ಯಾಂಕ್ ಖಾತೆಗೆ ಪ್ರಸ್ತುತ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಲಿಂಕ್ ಆಗಿದೆಯೇ ಎಂದು ಪರಿಶೀಲಿಸಿಕೊಳ್ಳುವುದು ಒಳಿತು. ನಿಯಮಿತವಾಗಿ KYC ಅಪ್‌ಡೇಟ್ ಮಾಡಿಕೊಳ್ಳುವ ಮೂಲಕ ಖಾತೆ ಸ್ಥಗಿತಗೊಳ್ಳುವುದನ್ನು ತಪ್ಪಿಸಿಕೊಳ್ಳಬಹುದು.
