Saturday, March 14, 2026

ಸತ್ಯ | ನ್ಯಾಯ |ಧರ್ಮ

ಕಾರಾಗೃಹಗಳಲ್ಲಿ ಮಾದಕ ವಸ್ತು ನಿಯಂತ್ರಣಕ್ಕೆ – ಹೊಸ ರೂಲ್ಸ್‌

ಬೆಂಗಳೂರು : ಮಾದಕ ವಸ್ತುಗಳಿಂದ (Drugs) ಮುಕ್ತವಾದ ಜೈಲು ವ್ಯವಸ್ಥೆ ರೂಪಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ (ADGP Alok kumar) ಅವರು ಅಧಿಕಾರಿಗಳಿಗೆ ವಿಶೇಷ ಸೂಚನೆ ನೀಡಿದ್ದಾರೆ. ಇದರ ಭಾಗವಾಗಿ ಕಾರಾಗೃಹಗಳಲ್ಲಿ (Prisons) ಇರುವ ಬಂಧಿತ ಕೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸುವ ವ್ಯವಸ್ಥೆ ಆರಂಭಿಸಲಾಗಿದೆ. ಇತ್ತೀಚೆಗೆ ಜೈಲು ಸಿಬ್ಬಂದಿಯ ಮೂಲಕವೇ ನಿಷೇಧಿತ ವಸ್ತುಗಳು ಒಳಗೆ ತಲುಪಿದ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ, ನಿಮಾನ್ಸ್ ಆಸ್ಪತ್ರೆಯ ಸಹಕಾರದಲ್ಲಿ ಪರೀಕ್ಷೆಗಳನ್ನು ಕೈಗೊಳ್ಳುವ ನಿರ್ಧಾರ ಮಾಡಲಾಗಿದೆ. ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಬಂಧಿತರಲ್ಲಿ ಡ್ರಗ್ ಸೇವನೆ ತಡೆಯುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗಿದೆ.

ಪ್ರಾರಂಭಿಕ ಹಂತದಲ್ಲಿ ಸುಮಾರು 10 ಶೇಕಡಾ ಕೈದಿಗಳನ್ನು ಆಯ್ಕೆ ಮಾಡಿ ಗಾಂಜಾ, ಹೆರೊಯಿನ್, ಕೊಕೇನ್ ಮುಂತಾದ ಮಾದಕ ವಸ್ತುಗಳಿಗಾಗಿ ವಿಶೇಷ ಕಿಟ್‌ಗಳ ಸಹಾಯದಿಂದ ಪರೀಕ್ಷೆ ನಡೆಸಲಾಗುತ್ತಿದೆ.ಮಾದಕ ವಸ್ತು ಬಳಕೆ ಕಂಡುಬಂದರೆ, ವ್ಯಸನಕ್ಕೆ ಒಳಗಾದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಅವರ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page