ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ : ಶಂಕಿತರ ಜಾಡನ್ನು ಬೆನ್ನತ್ತಿ ಇಂದು NIA ದಾಳಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಹಿಂದೆ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಅಷ್ಟೇ ಅಲ್ಲದೇ ಕೊಯಮತ್ತೂರ್ ನಲ್ಲಿಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಯಮತ್ತೂರ್ ಮೂಲದ ವೈದ್ಯ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

ಇತ್ತೀಚಿನ ಸುದ್ದಿಗಳು