Friday, October 11, 2024

ಸತ್ಯ | ನ್ಯಾಯ |ಧರ್ಮ

ಮಹಿಳೆಗೆ ಆ*ಸಿಡ್‌ ಎರಚುವ ಬೆದರಿಕೆ: ಕಂಪನಿಯಿಂದ ಉದ್ಯೋಗಿ ವಜಾ

ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ತೊಟ್ಟಿದ್ದ ಬಟ್ಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕಿದ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಈ ಕುರಿತು ಸಂತ್ರಸ್ತ ಮಹಿಳೆಯ ಪತಿ ದೂರು ನೀಡಿದ್ದರು. ಜೊತೆಗೆ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಕಳುಹಿಸಲಾಗಿದ್ದ ಬೆದರಿಕೆ ಸಂದೇಶದ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದರು. ಇದರ ನಂತರ ನಿಕಿತ್ ಶೆಟ್ಟಿ ಎಂಬ ಈ ವ್ಯಕ್ತಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಮಹಿಳೆಯ ಪತಿ ಹಾಗೂ ಪತ್ರಕರ್ತರಾದ ಶಹಬಾಜ್ ಅನ್ಸಾರ್ ಈ ವಿಷಯವನ್ನು ಕರ್ನಾಟಕ ಡಿಜಿಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಮನಕ್ಕೂ ತಂದಿದ್ದರು.

ನಿಕಿತ್‌ ಶೆಟ್ಟಿ Etios Services ಎನ್ನುವ ಸಂಸ್ಥೆಯ ಉದ್ಯೋಗಿಯಾಗಿದ್ದು, ಕಂಪನಿ ಈತನ ನೀಚ ನಡವಳಿಕೆಗಾಗಿ ಕೆಲಸದಿಂದ ವಜಾ ಮಾಡಿ ಆದೇಶ ಹೊರಡಿಸಿದೆ.

ಕಂಪನಿಯಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ಸೃಷ್ಟಿಸುವ ನಿಟ್ಟಿನಲ್ಲಿ ನಿಕಿತ್‌ ಶೆಟ್ಟಿಯನ್ನು ತಕ್ಷಣದಿಂದಲೇ ಕೆಲಸದಿಂದ ವಜಾ ಮಾಡಲಾಗಿದೆ ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page