Monday, January 12, 2026

ಸತ್ಯ | ನ್ಯಾಯ |ಧರ್ಮ

ರಾಜ್ಯ ಅಲ್ಪಸಂಖ್ಯಾತರ ಆಯೋಗದ ನೂತನ ಅಧ್ಯಕ್ಷರಾಗಿ ಯು.ನಿಸಾರ್ ಅಹಮದ್ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಯು.ನಿಸಾರ್ ಅಹ್ಮದ್ ಅವರನ್ನು ಸರ್ಕಾರ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.

ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರಾಜ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಕಾಯ್ದೆ 1994ರ ಸೆಕ್ಷನ್ 3(1) ಮತ್ತು 4(1) ರಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರಿವನ್ನು ಚಲಾಯಿಸಿ, ಯು ನಿಸಾರ್ ಅಹ್ಮದ್, ನಿವೃತ್ತ ಐಜಿಪಿ, ಇ-83, 6ಎ ಕ್ರಾಸ್, ಮಾನ್ಯತಾ ರೆಸಿಡೆನ್ಸಿ ಟೆಕ್ ಪಾರ್ಕ್, ರಾಚೇನಹಳ್ಳಿ, ಬೆಂಗಳೂರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಾಮ ನಿರ್ದೇಶನಗೊಳಿಸಲಾಗಿದೆ ಅಂತ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page