Tuesday, January 27, 2026

ಸತ್ಯ | ನ್ಯಾಯ |ಧರ್ಮ

ಮನೆಯೊಂದು ಪಕ್ಷ ಎರಡು: ಕಾಂಗ್ರೆಸ್‌ ಜೊತೆ ಕೈ ಜೋಡಿಸಲು ತೀರ್ಮಾನಿಸಿದ ಯೋಗೇಶ್ವರ್‌ ಪುತ್ರಿ

ಬೆಂಗಳೂರು: ಬಿಜೆಪಿ ನಾಯಕ, ವಿಧಾನ ಪರಿಷತ್‌ ಸದಸ್ಯ ಸಿಪಿ ಯೋಗೇಶ್ವರ್‌ ಪುತ್ರಿ ನಿಶಾ ಯೋಗೇಶ್ವರ್‌ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಸ್ವತಃ ನಿಶಾ ಯೋಗೇಶ್ವರ್‌ ಖಾಸಗಿ ಸುದ್ದಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಪ್ರಸ್ತುತ ಬಿಜೆಪಿಯಿಂದ ವಿಧಾನ ಪರಿಷತ್‌ ಸದಸ್ಯರಾಗಿರುವ ಸಿ ಪಿ ಯೋಗೇಶ್ವರ್‌ ಈ ಹಿಂದೆ ಕಾಂಗ್ರೆಸ್‌ ಪಕ್ಷದಲ್ಲಿದ್ದರು. ಈಗ ಅವರ ಮಗಳಾದ ನಿಶಾ ಯೋಗೇಶ್ವರ್‌ ಅವರು ತನ್ನ ತಂದೆ ಹಾದಿಯಿಂದ ಭಿನ್ನವಾದ ಹಾದಿಯನ್ನು ತುಳಿಯಲು ಸಜ್ಜಾಗಿದ್ದಾರೆ.

ಈ ಹಿಂದೆ ಹಲವು ಬಾರಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಸಂಸದ ಡಿಕೆ ಸುರೇಶ್‌ ಅವರನ್ನು ಭೇಟಿ ಮಾಡಿದ್ದ ನಿಶಾ ಯೋಗೇಶ್ವರ್‌ ಕಾಂಗ್ರೆಸ್‌ ಸೇರುವ ಬಗ್ಗೆ ಒಲವು ವ್ಯಕ್ತಪಡಿಸಿದ್ದರು. ಇದರ ಬಗ್ಗೆ ಕಾಂಗ್ರೆಸ್‌ ಪಕ್ಷದಲ್ಲಿಯೂ ಕೂಡ ಚರ್ಚೆಗಳು ನಡೆಯುತ್ತಿವೆ. ಈ ವಿಷಯವಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಡಿಕೆ ಸುರೇಶ್‌ ಕೂಡ ಮಾಹಿತಿ ನೀಡಿದ್ದರು. ನಿಶಾ ಅವರು ಕಾಂಗ್ರೆಸ್‌ ಸೇರುವ ಬಗ್ಗೆ ಅವರು ಹಲವು ಬಾರಿ ಮಾತನಾಡಿದ್ದಾರೆ.

ವಿಷಯದ ಕುರಿತು ಪ್ರತಿಕ್ರಿಯಿಸಿರುವ ನಿಶಾ ಯೋಗೇಶ್ವರ್‌ “ನಾನು ತಂದೆಯವರ ಒಪ್ಪಿಗೆಯೊಂದಿಗೇ ಮುಂದುವರೆಯುತ್ತಿದ್ದು, ಅವರು ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ನಾನು ಎಲ್ಲಿದ್ದರೂ ಚನ್ನಪಟ್ಟಣದ ಮನೆ ಮಗಳು. ನನಗೆ ಅವರು, ಇವರು ಎನ್ನುವ ಬೇಧವಿಲ್ಲ. ಸದ್ಯದಲ್ಲೇ ಕಾಂಗ್ರೆಸ್‌ ಸೇರುವ ದಿನಾಂಕ ನಿರ್ಧಾರವಾಗಲಿದೆ” ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page