ಶಿವಮೊಗ್ಗ ನಗರದಲ್ಲಿ ಟಿಪ್ಪು-ಸಾವರ್ಕರ್ ಫ್ಲೆಕ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತ 144 ಸೆಕ್ಷನ್ ಜಾರಿ ಮಾಡಿದೆ. ಜಾರಿಯ ನಂತರ ಶಿವಮೊಗ್ಗದಲ್ಲಿ ಇಬ್ಬರಿಗೆ ಚೂರಿ ಇರಿತವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹಿಂಸಾಚಾರ ಬುಗಿಲೆದ್ದಿದೆ.
ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಗಾಂಧಿ ಬಜಾರಿನಲ್ಲಿ ಪ್ರೇಮ್ ಸಿಂಗ್ ಎಂಬುವವರಿಗೆ ಚಾಕುವಿನಿಂದ ಇರಿದ ಮೊದಲ ಪ್ರಕರಣದ ಬೆನ್ನಲ್ಲೇ ನಗರದ ಅಶೋಕ ನಗರದಲ್ಲಿ ಪ್ರವೀಣ್ ಕುಮಾರ್ ಎಂಬುವವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಧ್ಯದ ಶಿವಮೊಗ್ಗ ನಗರದ ಪರಿಸ್ಥಿತಿ ಅತಿ ಸೂಕ್ಷ್ಮ ಸ್ಥಿತಿಯಲ್ಲಿದ್ದು 144 ಸೆಕ್ಷನ್ ಮುಂದುವರೆಯುವ ಸಾಧ್ಯತೆಯಿದೆ. ಶಿವಮೊಗ್ಗದ ಜೊತೆಗೆ ಭದ್ರಾವತಿಯಲ್ಲೂ ನಿಷೇಧಾಜ್ಞೆ ಜಾರಿಯಾಗಿದ್ದು ಮಂಗಳವಾರ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.