Friday, January 23, 2026

ಸತ್ಯ | ನ್ಯಾಯ |ಧರ್ಮ

ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಸಾಧ್ಯತೆ ; ಇಂದು ಘೋಷಣೆಯೊಂದೇ ಬಾಕಿ

ನವದೆಹಲಿ : ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ಮಹತ್ವದ ಹಾಗೂ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, 45 ವರ್ಷದ ನಿತಿನ್ ನಬಿನ್ ಅವರನ್ನು ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸುವ ಪ್ರಕ್ರಿಯೆ ಆರಂಭಿಸಿದೆ. ಹಿರಿಯ ನಾಯಕರ ಬೆಂಬಲದೊಂದಿಗೆ ನಿತಿನ್ ನಬಿನ್ ಅವರು ನಿನ್ನೆ ತಮ್ಮ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಸ್ಪಷ್ಟವಾಗಿದೆ.

ಕೇಂದ್ರ ಸಚಿವ ಜೆ.ಪಿ. ನಡ್ಡಾ, ಹಿರಿಯ ನಾಯಕರು ಅಮಿತ್ ಶಾ ಹಾಗೂ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ನಿತಿನ್ ನಬಿನ್ ಅವರು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಉನ್ನತ ನಾಯಕರು ಅವರ ಉಮೇದುವಾರಿಕೆಯನ್ನು ಬೆಂಬಲಿಸಿದ್ದಾರೆ.

ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆ ನಿತಿನ್ ನಬಿನ್ ಅವರು ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇಂದು, ನಿಗದಿಯಾಗಿರುವ ಔಪಚಾರಿಕ ಪ್ರಕ್ರಿಯೆಯ ಬಳಿಕ ಅಧಿಕೃತ ಘೋಷಣೆ ಹೊರಬೀಳಲಿದ್ದು, ಅದೇ ದಿನ ಅವರು ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ.

ನಾಮಪತ್ರ ಸಲ್ಲಿಸುವ ವೇಳೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಧರ್ಮೇಂದ್ರ ಪ್ರಧಾನ್, ಭೂಪೇಂದ್ರ ಯಾದವ್, ಕಿರಣ್ ರಿಜಿಜು ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು. ಬಿಜೆಪಿ ಚುನಾವಣಾ ಅಧಿಕಾರಿ ಕೆ. ಲಕ್ಷ್ಮಣ್ ಅವರಿಗೆ ನಾಮಪತ್ರದ ಸೆಟ್ ಹಸ್ತಾಂತರಿಸಲಾಯಿತು.

ಬಿಜೆಪಿ ನಿಯಮಾವಳಿ ಪ್ರಕಾರ, ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಮಂಡಳಿಗಳ ಸದಸ್ಯರನ್ನು ಒಳಗೊಂಡ ಚುನಾವಣಾ ಕಾಲೇಜಿನಿಂದ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ಒಂದೇ ಒಂದು ನಾಮಪತ್ರ ಸಲ್ಲಿಸದಿದ್ದಲ್ಲಿ ಮತದಾನವಿಲ್ಲದೆ ಅಭ್ಯರ್ಥಿಯನ್ನು ಆಯ್ಕೆಯಾದವರೆಂದು ಘೋಷಿಸುವ ವ್ಯವಸ್ಥೆ ಇದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page