Home ಬೆಂಗಳೂರು ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ- ಓನ್ಲಿ ಫಾಸ್ಟ್​ಟ್ಯಾಗ್

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ- ಓನ್ಲಿ ಫಾಸ್ಟ್​ಟ್ಯಾಗ್

ನೆಲಮಂಗಲ : ಏಪ್ರಿಲ್ 1, 2026 ರಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ (Toll Plazas) ನಗದು ಪಾವತಿಯನ್ನು (Cash Payment) ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೋಲ್ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಈಗಾಗಲೇ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ.

NHAI ಗಂಭೀರ ಚಿಂತನೆ ನಡೆಸಿದೆ. ಇದರ ಬದಲಾಗಿ ಫಾಸ್ಟ್‌ಟ್ಯಾಗ್ (FASTag) ಅಥವಾ ಯುಪಿಐ (UPI) ಮೂಲಕ ಕಡ್ಡಾಯವಾಗಿ ಡಿಜಿಟಲ್ ಪಾವತಿ ಮಾಡಬೇಕಾಗುತ್ತದೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ಮತ್ತು ಪಾರದರ್ಶಕತೆಗಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಹೊಸ ನಿಯಮದ ಪ್ರಕಾರ, ಟೋಲ್ ಬೂತ್​​ಗಳಲ್ಲಿ ನಗದು ಪಡೆಯಲಾಗುವುದಿಲ್ಲ. ಸುಗಮ ಪ್ರಯಾಣಕ್ಕಾಗಿ ಕಡ್ಡಾಯವಾಗಿ ಫಾಸ್ಟಾಗ್ ಅಥವಾ ಯುಪಿಐ ಮೂಲಕವೇ ಪಾವತಿ ಮಾಡಬೇಕಿದೆ. ಏಪ್ರಿಲ್ 15 ರಿಂದ ಫಾಸ್ಟಾಗ್ ಸ್ಕ್ಯಾನ್ ಆಗದಿದ್ದರೆ ಸಿಬ್ಬಂದಿ ಮ್ಯಾನುಯಲ್ ಆಗಿ ವಾಹನ ಸಂಖ್ಯೆ ನಮೂದಿಸಿ ಟೋಲ್ ಪಡೆಯುವುದನ್ನು ರದ್ದುಗೊಳಿಸಲಾಗಿದೆ.

ಕೇವಲ ಆಟೋಮ್ಯಾಟಿಕ್ ಫಾಸ್ಟ್​ಟ್ಯಾಗ್ ರೀಡರ್ ಮೂಲಕ ಮಾತ್ರ ಪಾವತಿಗೆ ಅವಕಾಶವಿರುತ್ತದೆ. ನೆಲಮಂಗಲ-ಹಾಸನ ಹಾಗೂ ಬೆಂಗಳೂರು-ತುಮಕೂರು-ಪುಣೆ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ಹೊಸ ನಿಯಮದ ಬಗ್ಗೆ ದೊಡ್ಡ ಫಲಕಗಳಲ್ಲಿ ಮಾಹಿತಿ ನೀಡಲಾಗಿದೆ.

ಹೀಗಾಗಿ ವಾಹನ ಸವಾರರು ತಮ್ಮ ಫಾಸ್ಟ್​ಟ್ಯಾಗ್ ಸಕ್ರಿಯವಾಗಿದೆಯೇ ಮತ್ತು ಅದರಲ್ಲಿ ಪೂರಕ ಬ್ಯಾಲೆನ್ಸ್ ಇದೆಯೇ ಎಂದು ಖಚಿತಪಡಿಸಿಕೊಂಡು ಹೆದ್ದಾರಿಗಿಳಿಯುವುದು ಉತ್ತಮ.

You cannot copy content of this page

Exit mobile version