Sunday, June 16, 2024

ಸತ್ಯ | ನ್ಯಾಯ |ಧರ್ಮ

ನನ್ನ ವಿರುದ್ಧ ಬಲವಂತದ ಕ್ರಮ ಬೇಡ: ಇ.ಡಿ ವಿರುದ್ದ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಕೇಜ್ರಿವಾಲ್

ನವದೆಹಲಿ:  ಇಡಿ (ಜಾರಿ ನಿರ್ದೇಶನಾಲಯ) ನನ್ನ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ. ನನ್ನನ್ನು ಬಂಧಿಸಲೂಬಹುದು ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಗುರುವಾರ ದೆಹಲಿ ಹೈಕೋರ್ಟ್‌ ನಲ್ಲಿ ಹೊಸ ಅರ್ಜಿ ಸಲ್ಲಿಸಿದ್ದಾರೆ.

ಅಬಕಾರಿ ನೀತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನ್ನ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದು ಬೇಡವೆಂದು  ವಿನಂತಿಸಿ ಕೇಜ್ರಿವಾಲ್‌ ಅವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ʼಎಕ್ಸ್‌ʼ ಮಾಹಿತಿ ನೀಡಿದೆ.

ಸುರೇಶ್ ಕುಮಾರ್‌ ಕೈಟ್ ಅವರಿರುವ ವಿಭಾಗೀಯ ಪೀಠ ಇಂದು ಈ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಇದುವರೆಗೂ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಅರವಿಂದ ಕೇಜ್ರಿವಾಲ್ ಅವರಿಗೆ 9 ಬಾರಿ ನೋಟಿಸ್‌ ಜಾರಿ ಮಾಡಿದೆ. ತಮಗೆ ಜಾರಿ ನಿರ್ದೇಶನಾಲಯ ನೀಡಿದ ಸರಣಿ ನೋಟಿಸ್ ಪ್ರಶ್ನಿಸಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಬಗ್ಗೆ ವಿವರಣೆ ಬಯಸಿ ಕೋರ್ಟ್ ಇ.ಡಿಗೆ ನೋಟಿಸ್‌ ಜಾರಿ ಮಾಡಿದೆ.

 ಬಂಧನದ ಆತಂಕ: ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸಲು ತಯಾರಿ ಮಾಡಿಕೊಂಡಿದೆ. ಈ ಬಂಧನವಾಗದಂತೆ ರಕ್ಷಣೆ ನೀಡಿದರೆ ವಿಚಾರಣೆಗೆ ಹಾಜರಾಗಲು ಸಿದ್ದರಿದ್ದಾರೆ ಎಂದು ಕೇಜ್ರಿವಾಲ್‌ ಪರ ವಕೀಲರು ಬುಧವಾರ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು.

Related Articles

ಇತ್ತೀಚಿನ ಸುದ್ದಿಗಳು