ರೈತರಿಗೆ ಸಂಪೂರ್ಣವಾಗಿ ಸಾಲಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ.
ಆದರೆ, ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕೇಂದ್ರ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು. ಕಿಸಾನ್ ಕ್ರೆಡಿಟ್ ಕಾರ್ಡ್‌ಗಳು, ರಿಯಾಯಿತಿ ಬಡ್ಡಿದರದಲ್ಲಿ 3 ಲಕ್ಷ ರೂಪಾಯಿಗಳವರೆಗೆ ಬೆಳೆ ಸಾಲ ಮತ್ತು ಪಿಎಂ ಕಿಸಾನ್ ನಿಧಿ ಮೂಲಕ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಅವರು ಉಲ್ಲೇಖಿಸಿದರು.
ಆರ್‌ಬಿಐ (RBI) ಮಾರ್ಗಸೂಚಿಗಳ ಪ್ರಕಾರ ರೈತರಿಗೆ ಅಗತ್ಯವಿರುವ ಸಾಲಗಳು ದೊರೆಯುವಂತೆ ಮಾರುಕಟ್ಟೆಯಲ್ಲಿ ಮತ್ತು ಬ್ಯಾಂಕ್‌ಗಳಲ್ಲಿ ಸಾಕಷ್ಟು ಹಣ ಲಭ್ಯವಿರುವಂತೆ ನೋಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.
