Saturday, January 17, 2026

ಸತ್ಯ | ನ್ಯಾಯ |ಧರ್ಮ

ಈ ಬಾರಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶವಿಲ್ಲ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಹತ್ತಾರು ಬಾರಿ ತನ್ನ ಸಂಸ್ಕೃತಿ, ಪರಂಪರೆ ಹಾಗೂ ಅಭಿವೃದ್ಧಿ ಸಾಧನೆಯನ್ನು ಪ್ರದರ್ಶಿಸಿದ್ದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ಲಭ್ಯವಾಗಿಲ್ಲ.

ಆತ್ಮನಿರ್ಭರ ಭಾರತಕ್ಕೆ ರಾಜ್ಯದ ಸಮಗ್ರ ಕೊಡುಗೆಯನ್ನು ಪ್ರತಿಬಿಂಬಿಸುವ ಉದ್ದೇಶದಿಂದ ‘ಮಿಲೆಟ್ಸ್ ಟು ಮೈಕ್ರೋ ಚಿಪ್’ ಎಂಬ ವಿಷಯಾಧಾರಿತ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಕರ್ನಾಟಕ ಸರ್ಕಾರ ಯೋಜಿಸಿತ್ತು. ಸಿರಿಧಾನ್ಯಗಳಿಂದ ಆರಂಭಿಸಿ ಆಧುನಿಕ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್ ಉತ್ಪಾದನೆವರೆಗೆ ರಾಜ್ಯದ ಸಾಧನೆಯನ್ನು ಈ ಸ್ತಬ್ಧಚಿತ್ರ ಪ್ರತಿನಿಧಿಸಬೇಕಾಗಿತ್ತು.

ಆದರೆ ಈ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅನುಮೋದನೆ ದೊರಕದ ಕಾರಣ, ಈ ಬಾರಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಭಾಗವಹಿಸುತ್ತಿಲ್ಲ. ಬದಲಾಗಿ, ಪ್ರಗತಿ ಮೈದಾನದಲ್ಲಿ ಸಾರ್ವಜನಿಕ ವೀಕ್ಷಣೆಗೆ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page