ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಹತ್ತಾರು ಬಾರಿ ತನ್ನ ಸಂಸ್ಕೃತಿ, ಪರಂಪರೆ ಹಾಗೂ ಅಭಿವೃದ್ಧಿ ಸಾಧನೆಯನ್ನು ಪ್ರದರ್ಶಿಸಿದ್ದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ಲಭ್ಯವಾಗಿಲ್ಲ.
ಆತ್ಮನಿರ್ಭರ ಭಾರತಕ್ಕೆ ರಾಜ್ಯದ ಸಮಗ್ರ ಕೊಡುಗೆಯನ್ನು ಪ್ರತಿಬಿಂಬಿಸುವ ಉದ್ದೇಶದಿಂದ ‘ಮಿಲೆಟ್ಸ್ ಟು ಮೈಕ್ರೋ ಚಿಪ್’ ಎಂಬ ವಿಷಯಾಧಾರಿತ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಕರ್ನಾಟಕ ಸರ್ಕಾರ ಯೋಜಿಸಿತ್ತು. ಸಿರಿಧಾನ್ಯಗಳಿಂದ ಆರಂಭಿಸಿ ಆಧುನಿಕ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್ ಉತ್ಪಾದನೆವರೆಗೆ ರಾಜ್ಯದ ಸಾಧನೆಯನ್ನು ಈ ಸ್ತಬ್ಧಚಿತ್ರ ಪ್ರತಿನಿಧಿಸಬೇಕಾಗಿತ್ತು.
ಆದರೆ ಈ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅನುಮೋದನೆ ದೊರಕದ ಕಾರಣ, ಈ ಬಾರಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಭಾಗವಹಿಸುತ್ತಿಲ್ಲ. ಬದಲಾಗಿ, ಪ್ರಗತಿ ಮೈದಾನದಲ್ಲಿ ಸಾರ್ವಜನಿಕ ವೀಕ್ಷಣೆಗೆ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಗಳು ತಿಳಿಸಿವೆ.
