Tuesday, August 12, 2025

ಸತ್ಯ | ನ್ಯಾಯ |ಧರ್ಮ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಯೋಜನೆ ಇಲ್ಲ: ಸಂಸತ್ತಿನಲ್ಲಿ ಕೇಂದ್ರ ಸಚಿವ ಸ್ಪಷ್ಟನೆ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಯಾವುದೇ ಕಾನೂನನ್ನು ಜಾರಿಗೆ ತರುವ ಯಾವುದೇ ಯೋಜನೆ ಕೇಂದ್ರಕ್ಕೆ ಇಲ್ಲ ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಎಸ್‌ಪಿ ಸಿಂಗ್ ಬಾಘೇಲ್ ಮಂಗಳವಾರ ಸಂಸತ್ತಿಗೆ ತಿಳಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಈ ಬಗ್ಗೆ ಕೇಂದ್ರ ಸಚಿವ ಸ್ಪಷ್ಟಪಡಿಸಿದ್ದಾರೆ.

ಲೋಕಸಭೆಯಲ್ಲಿ ಹಿರಿಯ ಬಿಜೆಪಿ ನಾಯಕ ಮತ್ತು ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಬಘೇಲ್, “ಸಂವಿಧಾನದ 246(3) ನೇ ವಿಧಿಯ ಪ್ರಕಾರ, ಕೇಂದ್ರ ಮತ್ತು ರಾಜ್ಯಗಳ ನಡುವಿನ ಶಾಸಕಾಂಗ ಅಧಿಕಾರಗಳ ವಿತರಣೆಯ ಅಡಿಯಲ್ಲಿ, ಪ್ರಾಣಿಗಳ ಸಂರಕ್ಷಣೆಯು ರಾಜ್ಯ ಶಾಸಕಾಂಗವು ಶಾಸನ ಮಾಡಲು ವಿಶೇಷ ಅಧಿಕಾರವನ್ನು ಹೊಂದಿರುವ ವಿಷಯವಾಗಿದೆ” ಎಂದು ಹೇಳಿದರು.

ಗೋವುಗಳ ಉತ್ತೇಜನ, ರಕ್ಷಣೆ ಮತ್ತು ಪಾಲನೆಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೈಗೊಂಡಿರುವ ಉಪಕ್ರಮಗಳನ್ನು ಬೆಂಬಲಿಸಲು ಮತ್ತು ಬಲಪಡಿಸಲು ಕೇಂದ್ರ ಸರ್ಕಾರವು ಡಿಸೆಂಬರ್ 2014 ರಿಂದ ರಾಷ್ಟ್ರೀಯ ಗೋಕುಲ್ ಮಿಷನ್ ಅನ್ನು ಜಾರಿಗೊಳಿಸುತ್ತಿದೆ. ಆದರೆ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಯಾವುದೇ ಪ್ರಸ್ತಾಪ ಕೇಂದ್ರದ ಮುಂದಿಲ್ಲ ಎಂದು ಸಚಿವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page