ಸಣ್ಣ ಹಾಗೂ ಬೀದಿಬದಿ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಸಭೆ ನಡೆಸಿ ಸಣ್ಣ ಹಾಗೂ ಬೀದಿಬದಿ ವ್ಯಾಪಾರಿಗಳು ಹಾಗೂ ತರಕಾರಿ ವ್ಯಾಪಾರಿಗಳಿಗೆ ನೀಡಿದ ನೋಟೀಸ್ ಅಡಿಯಲ್ಲಿ ತೆರಿಗೆ ಕಟ್ಟುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ 3 ವರ್ಷದ ತೆರಿಗೆ ಬಾಕಿ ವಸೂಲಿಗೆ ಬ್ರೇಕ್ ಹಾಕಿದೆ.
ಸಧ್ಯ ನೋಟೀಸ್ ನಿಂದ ಕಂಗಾಲಾಗಿದ್ದ ಸಣ್ಣ ವ್ಯಾಪಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 3 ವರ್ಷಗಳ ಬಾಕಿ ವಸೂಲಿ ಮಾಡದಿರಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕರೆದ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದರ ಜೊತೆಗೆ ಸಣ್ಣ ಬೀದಿಬದಿ ವ್ಯಾಪಾರಿಗಳು GST ನೋಂದಣಿ ಮಾಡಿಸುವುದು ಕಡ್ಡಾಯ ಎಂದು ಹೇಳಿದ್ದಾರೆ. ಸಣ್ಣ ವರ್ತಕರು ಏನೇ ವ್ಯಾಪಾರ ವಹಿವಾಟು ನಡೆಸುವುದಿದ್ದರೂ GST ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ “GST ಕೌನ್ಸಿಲ್ ಇರುವುದು ಕೇಂದ್ರ ಸರ್ಕಾರದ ಅಡಿಯಲ್ಲಿ. ರಾಜ್ಯ ಸರ್ಕಾರ ಏನಿದ್ದರೂ ತೆರಿಗೆ ವಸೂಲಿ ಮಾಡಿ ಕೊಡುವುದಷ್ಟೇ ನಮ್ಮ ಕೆಲಸ. ಹೀಗಾಗಿ 40 ಲಕ್ಷಕ್ಕಿಂತ ಜಾಸ್ತಿ ವಹಿವಾಟು ನಡೆಸುವ ವ್ಯಾಪಾರಿಗಳಿಗೆ GST ಮೂಲಕ ಟ್ಯಾಕ್ಸ್ ಹಾಕುವ ಪ್ರಕ್ರಿಯೆ ನಡೆಸಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ