ಕಾರು ಸೇರಿದಂತೆ ಲಘು ಮೋಟಾರು ವಾಹನಗಳ ಟೋಲ್ ಶುಲ್ಕ ರದ್ದು

ಮುಂಬೈ: ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ನಗರ ಪ್ರವೇಶಿಸುವ ಲಘು ಮೋಟಾರು ವಾಹನಗಳ ಟೋಲ್ ಶುಲ್ಕವನ್ನು ರದ್ದುಪಡಿಸುವುದಾಗಿ ಘೋಷಿಸಲಾಗಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಇದು ಜಾರಿಗೆ ಬಂದಿದೆ. ಇದು ಕಾರುಗಳು (ಹ್ಯಾಚ್‌ಬ್ಯಾಕ್‌ಗಳು, ಸೆಡಾನ್‌ಗಳು, SUVಗಳು), ಜೀಪ್‌ಗಳು, ವ್ಯಾನ್‌ಗಳು, ಆಟೋ ರಿಕ್ಷಾಗಳು, ಟ್ಯಾಕ್ಸಿಗಳು, ಡೆಲಿವರಿ ವ್ಯಾನ್‌ಗಳು ಮತ್ತು ಲಘು ಟ್ರಕ್‌ಗಳಿಗೆ ಅನ್ವಯಿಸುತ್ತದೆ.

Related Articles

ಇತ್ತೀಚಿನ ಸುದ್ದಿಗಳು