Home ದೇಶ ಅಮೆರಿಕದ ಮಧ್ಯಸ್ಥಿಕೆ ವಹಿಸಿಲ್ಲ: ವಿಕ್ರಮ್ ಮಿಶ್ರಿ

ಅಮೆರಿಕದ ಮಧ್ಯಸ್ಥಿಕೆ ವಹಿಸಿಲ್ಲ: ವಿಕ್ರಮ್ ಮಿಶ್ರಿ

0

ದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಯಾವುದೇ ಕದನ ವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸೋಮವಾರ ಸಂಸದೀಯ ಸಮಿತಿಗೆ ಸ್ಪಷ್ಟಪಡಿಸಿದ್ದಾರೆ.

ಎರಡು ನೆರೆಹೊರೆಯವರ ನಡುವಿನ ದ್ವಿಪಕ್ಷೀಯ ಮಟ್ಟದಲ್ಲಿ ಮಿಲಿಟರಿ ಚಟುವಟಿಕೆಗಳನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷವನ್ನು ನಿಲ್ಲಿಸುವಲ್ಲಿ ತಮ್ಮ ಸರ್ಕಾರದ ಪಾತ್ರವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳುತ್ತಿರುವುದನ್ನು ಕೆಲವು ವಿರೋಧ ಪಕ್ಷದ ಸದಸ್ಯರು ಪ್ರಶ್ನಿಸಿದ ಸಂದರ್ಭದಲ್ಲಿ ಮಿಸ್ರಿಯವರಿಂದ ಈ ಹೇಳಿಕೆ ಬಂದಿದೆ.

You cannot copy content of this page

Exit mobile version