Home ಜನ-ಗಣ-ಮನ ಕರ್ನಾಟಕ ರಾಜ್ಯೋತ್ಸವಕ್ಕೆ ಎಲ್ಲಾ ಸರ್ಕಾರಿ ನೌಕರರು, ಶಾಲಾ ಕಾಲೇಜು ವಿದ್ಯಾರ್ಥಿಗಳ ಕಡ್ಡಾಯ ಹಾಜರಾತಿಗೆ ಸೂಚನೆ

ಕರ್ನಾಟಕ ರಾಜ್ಯೋತ್ಸವಕ್ಕೆ ಎಲ್ಲಾ ಸರ್ಕಾರಿ ನೌಕರರು, ಶಾಲಾ ಕಾಲೇಜು ವಿದ್ಯಾರ್ಥಿಗಳ ಕಡ್ಡಾಯ ಹಾಜರಾತಿಗೆ ಸೂಚನೆ

0

ನವೆಂಬರ್ 1 ರ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಎಲ್ಲಾ ಸರ್ಕಾರಿ ಕಛೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ಕಡ್ಡಾಯ ಆಚರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೆ ಎಲ್ಲಾ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ರಾಜ್ಯೋತ್ಸವ ದಿನದಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರೀಯ ಧ್ವಜಾರೋಹಣ ನೇರವೆರಿಸಿ, ಸಾರ್ವಜನಿಕರಿಗೆ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.

ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸಿ ಯಶಸ್ವಿಗೊಳಿಸಲು ವಿವಿಧ ಇಲಾಖೆಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ. ಪ್ರತಿ ಇಲಾಖೆಯು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಮತ್ತು ತಮ್ಮ ಇಲಾಖೆಗಳ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.

ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಎಲ್ಲ ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕ ಮುಖ್ಯ ವೃತ್ತಗಳಲ್ಲಿ ದೀಪಾಲಾಂಕಾರ ಮಾಡಬೇಕು. ರಾಜ್ಯೋತ್ಸವ ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಕುಡಿಯುವ ನೀರು, ಶೌಚಾಲಯ ಮತ್ತು ಭಾಗವಹಿಸುವ ವಿದ್ಯಾರ್ಥಿಗಳಿಗೆ ಅಲ್ಪೋಪಹಾರದ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಗಳು ನಿರ್ವಹಿಸಬೇಕು.

ಸಚಿವರ ಸಂದೇಶಕ್ಕೆ ಮಾಹಿತಿ: ನವೆಂಬರ್ 01 ರಂದು ಜರುಗುವ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣದ ನಂತರ ಜಿಲ್ಲೆಯ ಸಾರ್ವಜನಿಕರಿಗೆ ರಾಜ್ಯೋತ್ಸವದ ಸಂದೇಶವನ್ನು ನೀಡುತ್ತಾರೆ. ಈ ಸಂದೇಶಕ್ಕೆ ಅಗತ್ಯವಿರುವ ವಿವಿಧ ಇಲಾಖೆಗಳಲ್ಲಿನ ಪ್ರಗತಿ ವರದಿಯನ್ನು ಆಯಾ ಇಲಾಖಾ ಮುಖ್ಯಸ್ಥರು ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.

You cannot copy content of this page

Exit mobile version