Saturday, June 15, 2024

ಸತ್ಯ | ನ್ಯಾಯ |ಧರ್ಮ

ನವೆಂಬರ್ 18ಕ್ಕೆ ನವಿರಾದ ಪ್ರೇಮಕಥೆ ಹೊತ್ತ ‘ಖಾಸಗಿ ಪುಟಗಳು’ ರಿಲೀಸ್

ಬೆಂಗಳೂರು : ನವೀರಾದ ಪ್ರೇಮಕಥೆಯುಳ್ಳ ‘ಖಾಸಗಿ ಪುಟಗಳು’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಟ್ರೇಲರ್ ಹಾಗೂ ಚೆಂದದ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿದೆ. ಇದೀಗ ಪ್ರೇಕ್ಷಕರ ಮುಂದೆ ಬರಲು ಸಿನಿಮಾ ರೆಡಿಯಾಗಿದ್ದು, ನವೆಂಬರ್ 18ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

‘ಖಾಸಗಿ ಪುಟಗಳು’ ಚಿತ್ರ ಸಂಪೂರ್ಣ ಹೊಸಬರ ಪ್ರಯತ್ನ. ಕಾಲೇಜು ಹುಡುಗನ್ನೊಬ್ಬನ ನವೀರಾದ ಪ್ರೇಮಕಥೆ ಹೊತ್ತ ಸಿನಿಮಾವಿದು. ಕಿರುಚಿತ್ರದಲ್ಲಿ ನಟಿಸಿ ಅನುಭವ ಇರುವ ವಿಶ್ವ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಶ್ವೇತಾ ಡಿಸೋಜ ನಾಯಕಿಯಾಗಿ ನಟಿಸಿದ್ದಾರೆ.

ಚಿತ್ರದ ನಾಯಕಿ ಶ್ವೇತ ಡಿಸೋಜ ಮಾತನಾಡಿ, “ಹಿಂದಿಯಲ್ಲಿ ‘ವೈ’ ಎಂಬ ಸಿನಿಮಾದಲ್ಲಿ ನಟಿಸಿದ್ದೇನೆ. ಇದು ನನ್ನ ಮೊದಲ ಕನ್ನಡ ಸಿನಿಮಾ. ಭೂಮಿ ಪಾತ್ರದಲ್ಲಿ ನಟಿಸಿದ್ದೇನೆ. ಇನೋಸೆಂಟ್ ಹಾಗೂ ಮೆಚೋರ್ಡ್ ಎರಡು ಶೇಡ್ ನಲ್ಲಿ ಕಾಣಸಿಗಲಿದ್ದೇನೆ” ಎಂದು ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

“ಕಿರುಚಿತ್ರಗಳಲ್ಲಿ ಅಭಿನಯಿಸುತ್ತಿದ್ದೆ ಸಿನಿಮಾಗಳಲ್ಲಿ ಅಭಿನಯಿಸಬೇಕು ಎಂಬ ಆಸೆಯಿತ್ತು. ನಾಯಕ ನಟನಾಗಿ ಇದು ನನ್ನ ಮೊದಲ ಸಿನಿಮಾ. ಒಂದು ತಂಡವಾಗಿ ಎಲ್ಲರೂ ಈ ಸಿನಿಮಾವನ್ನು ಮಾಡಿದ್ದೇವೆ. ನವೆಂಬರ್ 18ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ ಎಲ್ಲರೂ ನೋಡಿ ಹರಸಬೇಕು” ಎಂದು ನಾಯಕ ವಿಶ್ವ ಮಾತನಾಡಿದರು.

ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮಾತನಾಡಿ, “ಸಂತೋಷ್ ಶ್ರೀಕಂಠಪ್ಪ ಅವರಿಗೆ ಇರುವ ಸಿನಿಮಾ ಪ್ರೀತಿ ನೋಡಿ ಈ ಚಿತ್ರವನ್ನು ಒಪ್ಪಿಕೊಂಡೆ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ, ಕೆ. ಕಲ್ಯಾಣ್, ಪ್ರಮೋದ್ ಮರವಂತೆ, ತ್ರಿಲೋಕ್ ತ್ರಿವಿಕ್ರಮ್ ಸಾಹಿತ್ಯ ಬರೆದಿದ್ದಾರೆ. ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ ಎಲ್ಲರೂ ಸಿನಿಮಾ ನೋಡಿ ಹೊಸಬರನ್ನು ಬೆಳೆಸಿ” ಎಂದು ಹೇಳಿದರು.

ಚೇತನ್ ದುರ್ಗಾ, ನಂದಕುಮಾರ್,ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಎಸ್ ವಿ ಎಂ ಮೋಶನ್ ಪಿಕ್ಚರ್ ಬ್ಯಾನರ್ ನಡಿ ಮಂಜು ವಿ ರಾಜ್, ವೀಣಾ ವಿ ರಾಜ್, ಮಂಜುನಾಥ್ ಡಿ ಎಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.  ವಿಶ್ವಜಿತ್ ರಾವ್ ಛಾಯಾಗ್ರಹಣ, ರಾಕೇಶ್ ಆಚಾರ್ಯ ಬಿ.ಜಿ.ಎಂ ಮಾಡಿದ್ದು, ಆಶಿಕ್ ಕುಸುಗೋಳಿ ಸಂಕಲನ ಚಿತ್ರಕ್ಕಿದೆ.

Related Articles

ಇತ್ತೀಚಿನ ಸುದ್ದಿಗಳು