Home ರಾಜ್ಯ ರಾಜ್ಯ ಬಜೆಟ್: ಬುಡಕಟ್ಟು ಪಂಗಡಗಳ ಪೌಷ್ಠಿಕತೆಗೆ ಒತ್ತು

ರಾಜ್ಯ ಬಜೆಟ್: ಬುಡಕಟ್ಟು ಪಂಗಡಗಳ ಪೌಷ್ಠಿಕತೆಗೆ ಒತ್ತು

0

ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ಧಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ 6 ತಿಂಗಳುಗಳಿಗೆ ನೀಡಲಾಗುತ್ತಿದೆ. ಇದನ್ನು 12 ತಿಂಗಳಿಗೆ ವಿಸ್ತರಿಸಲಾಗುವುದು. ಇದಕ್ಕೆ ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಒದಗಿಸಲಿದೆ.

ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೂ ಕೆಲವು ಸಹಾಯಗಳ ಘೋಷಣೆ

  • ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು 60 ಕೋಟಿ ಅನುದಾನ ಘೋಷಿಸಲಾಗಿದೆ.
  • ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್‌ ವ್ಯಾಸಂಗ ಮಾಡಲು ಶೇ 2 ಬಡ್ಡಿ ದರದಲ್ಲಿ ಸಾಲ.
  • ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ ಐದು ಕೋಟಿ ವೆಚ್ಚದಲ್ಲಿ
  • ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹತ್ತು ತಿಂಗಳು ವಸತಿ ಸಹಿತ ಐಎಎಸ್ ಹಾಗೂ ಕೆ.ಎ.ಎಸ್ ಮತ್ತು ಇತರ ಸ್ಪರ್ಧಾತ್ಮಕ
  • ಪರೀಕ್ಷೆಗಳ ತರಬೇತಿ. -ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿ ಗಳಲ್ಲಿ ಪದವಿ ಸ್ನಾತಕೋತ್ತರ ವ್ಯಾಸಾಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷದ ವರೆಗೆ ಸಾಲ

You cannot copy content of this page

Exit mobile version