Wednesday, August 28, 2024

ಸತ್ಯ | ನ್ಯಾಯ |ಧರ್ಮ

ಒತ್ತುವರಿ ಸಮಸ್ಯೆ; ಬಡ ರೈತರಿಗೆ ತಾತ್ಕಾಲಿಕ ರಿಲೀಫ್ ನೀಡಿದ ರಾಜ್ಯ ಸರ್ಕಾರ

ಅರಣ್ಯ ಭೂಮಿ ಒತ್ತುವರಿ ತೆರವಿನ ಬಗ್ಗೆ ಎದ್ದಿರುವ ದೊಡ್ಡ ಆತಂಕಕ್ಕೆ ರಾಜ್ಯ ಸರ್ಕಾರ ಸಧ್ಯಕ್ಕೆ ಬ್ರೇಕ್ ಹಾಕಿದ್ದು, ಬಡ ರೈತರು ನೆಮ್ಮದಿಯಿಂದ ಉಸಿರಾಡುವಂತಾಗಿದೆ. ಬದುಕಿಗಾಗಿ ಸೂರು ಕಟ್ಟಿಕೊಂಡು ಕೃಷಿ ಮಾಡಿಕೊಂಡಿದ್ದ ರೈತ ಸಮುದಾಯ ಬೀದಿಗೆ ಬರುವುದು ನಮ್ಮ ಉದ್ದೇಶವಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ‘ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥಕ್ಕೆ ಬಾಕಿ ಉಳಿದಿರುವ ಮತ್ತು ಪಟ್ಟಾ ಭೂಮಿ ಸೇರಿದಂತೆ ಮೂರು ಎಕರೆಗಿಂತ ಕಡಿಮೆ ಅರಣ್ಯ ಭೂಮಿ ಒತ್ತುವರಿ ತೆರವಿನ ಕುರಿತು ಸತ್ಯಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಹೇಳಿದ್ದಾರೆ.

ಕರಾವಳಿ, ಮಲೆನಾಡು ಭಾಗದಲ್ಲಿ ಉಂಟಾಗಿರುವ ಗೊಂದಲ ನಿವಾರಣೆಯ ಬಗ್ಗೆ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದು, ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಅಪಪ್ರಚಾರ ಮಾಡಲಾಗುತ್ತಿದೆ. ಸರ್ಕಾರ ಬಡ ರೈತರ ಭೂಮಿ ಒತ್ತುವರಿ ತೆರವು ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.

2015ರ ನಂತರ ಮತ್ತು ದೊಡ್ಡ ಪ್ರಮಾಣದಲ್ಲಿ ಆಗಿರುವ ಅರಣ್ಯ ಮಾತ್ರ ತೆರವು ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ದೊಡ್ಡ ಒತ್ತುವರಿ ಮತ್ತು 2015ರ ನಂತರದ ಒತ್ತುವರಿಯನ್ನು ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶಿಸಿದ್ದು, ಅದರ ಆಧಾರದಲ್ಲಿ ಒತ್ತುವರಿ ತೆರವಿಗೆ ಆದೇಶಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page