Home ಬ್ರೇಕಿಂಗ್ ಸುದ್ದಿ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಪುನರಾಯ್ಕೆ

ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಪುನರಾಯ್ಕೆ

0

ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಅವರು ಪುನರಾಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್‌ ಹುದ್ದೆಗೆ ಏರಿದವರ ಸಾಲಿಗೆ ಓಂ ಬಿರ್ಲಾ ಅವರು ಬಂದಿದ್ದಾರೆ.

ಸುಮಾರು 7 ದಶಕಗಳ ನಂತರ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆ ಇದಾಗಿದ್ದು, ಆಡಳಿತ ಪಕ್ಷದಿಂದ ಓಂ ಬಿರ್ಲಾ ಹಾಗೂ ವಿರೋಧ ಪಕ್ಷಗಳ ಕಡೆಯಿಂದ ಕೆ ಸುರೇಶ್ ನಾಮನಿರ್ದೇಶನಗೊಂಡಿದ್ದರು.

ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅನುಮೋದಿಸಿದರು. ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಓಂ ಬಿರ್ಲಾ ಅವರ ಹೆಸರನ್ನು ಅನುಮೋದಿಸಿದರು.

ವಿರೋಧ ಪಕ್ಷದ ಸದಸ್ಯರು ಕೋಡಿಕುನ್ನಿಲ್ ಸುರೇಶ್ ಅವರ ಹೆಸರನ್ನು ಪ್ರಸ್ತಾಪಿಸಿ, ಅನುಮೋದಿಸಿದರು.

ಹಂಗಾಮಿ ಸ್ಪೀಕರ್‌ ಭರ್ತೃಹರಿ ಮೆಹತಾಬ್ ಅವರು ಪ್ರಸ್ತಾಪವನ್ನು ಮತಕ್ಕೆ ಹಾಕಿದರು. ಧ್ವನಿ ಮತ ಮೂಲಕ ಪ್ರಸ್ತಾವನೆಗೆ ಅನುಮೋದನೆ ಲಭಿಸಿತು. ಓಂ ಬಿರ್ಲಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ ಎಂದು ಹಂಗಾಮಿ ಸ್ಪೀಕರ್ ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ, ಸಚಿವ ಕಿರಣ್ ರಿಜಿಜು ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನೂತನ ಸ್ಪೀಕರ್‌ ಅವರನ್ನು ಪೀಠಕ್ಕೆ ಕರೆತಂದರು.

You cannot copy content of this page

Exit mobile version