Friday, September 5, 2025

ಸತ್ಯ | ನ್ಯಾಯ |ಧರ್ಮ

ಕೆರೆಗೆ ಟ್ರ್ಯಾಕ್ಟರ್‌ ಬಿದ್ದು 20 ಪುಣ್ಯಸ್ನಾನಕ್ಕೆ ಹೊರಟಿದ್ದ ಭಕ್ತರ ಸಾವು

ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ ಮುಖ್ಯಮಂತ್ರಿ

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಹೈಸ್ಪೀಡ್ ಟ್ರ್ಯಾಕ್ಟರ್ ಟ್ರಾಲಿಯು ನಿಯಂತ್ರಣ ಕಳೆದುಕೊಂಡು ಕೊಳಕ್ಕೆ ಪಲ್ಟಿಯಾದ ಪರಿಣಾಮ ಏಳು ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

ವಾಹನವು ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಲು ಭಕ್ತರನ್ನು ಕದರಗಂಜ್ ಘಾಟ್‌ಗೆ ಕರೆದೊಯ್ಯುತ್ತಿತ್ತು ಎಂದು ವರದಿಯಾಗಿದೆ.

ಈ ಘಟನೆಯು ಪಟಿಯಾಲಿ ಕೊತ್ವಾಲಿ ಪ್ರದೇಶದ ದರಿಯಾಗಂಜ್ ನಿಲ್ದಾಣದ ಬಳಿ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲಿಯಾದವರೆಲ್ಲರೂ ಇಟಾ ಜಿಲ್ಲೆಯ ಜೈತಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಕಾಸಾ ಗ್ರಾಮದ ನಿವಾಸಿಗಳು. ಅವರು ಮಾಘ ಪೂರ್ಣಿಮಾ ಸಂದರ್ಭದಲ್ಲಿ ಪವಿತ್ರ ಸ್ನಾನಕ್ಕಾಗಿ ಕದರಗಂಜ್ ಗಂಗಾ ಘಾಟ್‌ಗೆ ಹೋಗುತ್ತಿದ್ದರು.

ಕಾಸ್‌ಗುಂಜ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಅಪರ್ಣಾ ರಜತ್ ಕೌಶಿಕ್ ಪ್ರಕಾರ, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

“ಘಟನೆಯ ಬಗ್ಗೆ ನಮಗೆ ಮಾಹಿತಿ ದೊರೆತ ತಕ್ಷಣ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ. ನಮ್ಮ ತಂಡವು ಸ್ಥಳೀಯರೊಂದಿಗೆ ಸೇರಿ ಸಾಧ್ಯವಾದಷ್ಟು ಜನರನ್ನು ರಕ್ಷಿಸಲು ವೇಗವಾಗಿ ಕೆಲಸ ಮಾಡಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಮತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತಿದೆ” ಅವರು ಹೇಳಿದರು.

ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page