ರಾಜ್ಯಾದ್ಯಂತ ಒಂದು ವಾರ ಬಾರಿ ಮಳೆ ಮುನ್ಸೂಚನೆ

ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಬಾರಿ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರ ಕಾಲ ಗುಡುಗು ಸಿಡಿಲು ಸಹಿತ ಮಳೆ ಬೀಳಲಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ನಡುವೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿಯೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಯ ಹಲವೆಡೆ ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು