Wednesday, April 16, 2025

ಸತ್ಯ | ನ್ಯಾಯ |ಧರ್ಮ

ಇಂದು ಕಾಂಗ್ರೆಸ್ ಪಕ್ಷದಿಂದ ದೇಶವ್ಯಾಪಿ ಪ್ರತಿಭಟನೆ

ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಇಂದು ದೇಶಾದ್ಯಂತ ಎಲ್ಲಾ ಜಾರಿ ನಿರ್ದೇಶನಾಲಯ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ಕರೆ ನೀಡಿದೆ.

ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಆರೋಪಪಟ್ಟಿ ಸಲ್ಲಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಲಿದೆ. ಎ

ಲ್ಲಾ ರಾಜ್ಯಗಳ ಜಿಲ್ಲಾ ಮಟ್ಟದ ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಜಾರಿ ನಿರ್ದೇಶನಾಲಯ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸುವಂತೆ ಪಕ್ಷವು ತನ್ನ ಕಾರ್ಯಕರ್ತರಿಗೆ ಕರೆ ನೀಡಿದೆ. ಕೇಂದ್ರ ಸಂಸ್ಥೆಗಳ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪಕ್ಷ ಹೇಳಿಕೊಂಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page