Thursday, March 27, 2025

ಸತ್ಯ | ನ್ಯಾಯ |ಧರ್ಮ

ಮುಕ್ತ ವಿಶ್ವವಿದ್ಯಾಲಯ: ವಿವಿಧ ಸ್ನಾತಕ, ಸ್ನಾತಕೋತ್ತರ ಪದವಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕೊಪ್ಪಳ ಪ್ರಾದೇಶಿಕ ಕೇಂದ್ರದಿಂದ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಗೆ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಿಗೆ ಸ್ಥಳದಲ್ಲಿಯೇ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಾಂಪ್ರದಾಯಿಕವಾಗಿ ಕಾಲೇಜಿಗೆ ತೆರಳದೇ ಮನೆಯಲ್ಲೇ ಕುಳಿತುಕೊಂಡು, ಯಾವುದೇ ಸರ್ಕಾರಿ ಅರೆ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯವನ್ನು ನಿರ್ವಹಿಸುತ್ತಾ ದೂರ ಶಿಕ್ಷಣದ ವ್ಯವಸ್ಥೆಯಡಿ ಶಿಕ್ಷಣ ಪಡೆಯಲು ಈ ಭಾಗದ ಆಸಕ್ತ ವಿದ್ಯಾರ್ಥಿ ಮತ್ತು ಪೋಷಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನದೇ ಆದ ಪ್ರಾದೇಶಿಕ ಕೇಂದ್ರವನ್ನು ನೂತನವಾಗಿ ಕೊಪ್ಪಳದಲ್ಲಿ ಪ್ರಾರಂಭಿಸಿರುತ್ತದೆ. ಈ ಕಛೇರಿಯು (ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯಾಲಯದ ಕಟ್ಟಡದ ಮೊದಲನೇ ಮಹಡಿ, ಗೋವನಕೊಪ್ಪ ಆಸ್ಪತ್ರೆ ಎದುರಿಗೆ, ಹೊಸಪೇಟೆ ರಸ್ತೆ) ಕೊಪ್ಪಳದಲ್ಲಿ ಇಲ್ಲಿ ಕಾರ್ಯಾನಿರ್ವಹಿಸುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ದೂರ ಶಿಕ್ಷಣದ ಮೂಲಕ ಶಿಕ್ಷಣವನ್ನು ನೀಡುತ್ತಿರುವ ಏಕೈಕ ವಿಶ್ವವಿದ್ಯಾನಿಲವಾಗಿದೆ. ಈಗಾಗಲೇ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿಯು ಪ್ರಾರಂಭವಾಗಿರುತ್ತದೆ.

ಪ್ರಥಮ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಲಿಬ್ & ಐ.ಎಸ್ಸಿ., ಬಿ.ಸಿ.ಎ., ಬಿ.ಬಿ.ಎ ಮತ್ತು ಬಿ.ಎಸ್.ಡಬ್ಲೂ ಹಾಗೂ ವಿವಿಧ ಎಂ.ಎ (ಕನ್ನಡ, ಇಂಗ್ಲೀಷ್, ಹಿಂದಿ, ಸಂಸ್ಕೃತ, ತೆಲುಗು, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಸಮಾಜಶಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಹಾಗೂ ಶಿಕ್ಷಣಶಾಸ್ತ್ರ) ಎಂ.ಎ-ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಎಂ.ಕಾಂ., ವಿವಿಧ ಎಂ.ಎಸ್ಸಿ (ರಸಾಯನಶಾಸ್ತ್ರ, ಜೀವಶಾಸ್ತ್ರ, ಮಾನವಶಾಸ್ತ್ರ, ಸಸ್ಯಶಾಸ್ತ್ರ, ಜೈವಿಕ ತಂತ್ರಜ್ಞಾನ, ಪರಿಸರ ವಿಜ್ಞಾನ, ವೈದ್ಯಕೀಯ ಪೋಷಣೆ ಮತ್ತು ಆಹಾರ ಪದ್ಧತಿ, ಆಹಾರ ಮತ್ತು ಪೋಷಣೆ, ಜೀವ ರಸಾಯನಶಾಸ್ತ್ರ, ಭೂಗೋಳಶಾಸ್ತ್ರ, ಮಾಹಿತಿ ತಂತ್ರಜ್ಞಾನ, ಸೂಕ್ಷ್ಮ ಜೀವವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ, ಪದವಿ ಶಿಕ್ಷಣ ಕ್ರಮಗಳಿಗೆ ವಿಶ್ವವಿದ್ಯಾನಿಲಯದ ನಿಯಮಗಳಿಗನುಗುಣವಾಗಿ ಸ್ಥಳದಲ್ಲಿಯೇ (Spot admission) ದಾಖಲಾತಿಗಳನ್ನು ಪಡೆದು ಪ್ರವೇಶಾತಿ ನೀಡುವ ಕುರಿತು ಶಿಕ್ಷಣವನ್ನು ಪಡೆಯಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಿಕೊಂಡು ಕೊಪ್ಪಳ ಪ್ರಾದೇಶಿಕ ಕೇಂದ್ರ ಕಛೇರಿಗೆ ಭೇಟಿನೀಡಿ, ನಿಗದಿತ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ, ಅಗತ್ಯ ದಾಖಲಾತಿಗಳ ನಕಲು ಪ್ರತಿಗಳನ್ನು ಪ್ರಾದೇಶಿಕ ಕೇಂದ್ರ ಕಛೇರಿಯಲ್ಲಿ ಸಲ್ಲಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ.
ಪ್ರವೇಶಾತಿಯನ್ನು ಹೊಂದಲು ಮಾರ್ಚ್ 31 ಕೊನೆಯ ದಿನಾಂಕವಾಗಿರುತ್ತದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9008588675 ಅಥವಾ 9743582257, 9071179986, 7483607715 ಗೆ ಹಾಗೂ ವಿವಿಯ ಅಂರ್ತಜಾಲ ವಿಳಾಸ: www.ksoumysuru.ac.in ಕ್ಕೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ, ಕೊಪ್ಪಳ ಪ್ರಾದೇಶಿಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page