ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಸ್. ಗಂಗಾಧರಯ್ಯನವರಿಗೆ  ʼಶಾ ಬಾಲೂರಾವ್ʼ ಪ್ರಶಸ್ತಿ

PPeepal Media

Peepal Media ಅಂಕಣ

• 2 ನಿಮಿಷದ ಓದು

ಎಸ್. ಗಂಗಾಧರಯ್ಯನವರಿಗೆ  ʼಶಾ ಬಾಲೂರಾವ್ʼ ಪ್ರಶಸ್ತಿ

ಬಿ ಎಂ ಶ್ರೀ ಪ್ರತಿಷ್ಠಾನ ನೀಡುವ “ಶಾ.ಬಾಲೂರಾವ್ʼ ಅನುವಾದ ಪ್ರಶಸ್ತಿಗೆ  ಎಸ್‌ ಗಂಗಾಧರಯ್ಯ ಅವರ ʼಬುನಿನ್‌ ಕಥೆಗಳು ಕೃತಿ ಆಯ್ಕೆಯಾಗಿದೆ. ನಿನ್ನೆ ಬಿ. ಎಂ.ಶ್ರೀ ಪ್ರತಿಷ್ಠಾನದಲ್ಲಿ  ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ವಿಜೇತರ ಬಗ್ಗೆ ಬರೆದಿದ್ದಾರೆ ಉಜ್ಜಜ್ಜಿ ರಾಜಣ್ಣ

ಹಿರಿಯ ಕತೆಗಾರರಾದ ಎಸ್. ಗಂಗಾಧರಯ್ಯನವರ ಅನುವಾದಿತ ಕೃತಿ ಬುನಿನ್ ಕತೆಗಳಿಗೆ ಈ ವರ್ಷದ “ಶಾ. ಬಾಲೂರಾವ್” ಪ್ರಶಸ್ತಿ ಬಂದಿದೆ. ಅನುವಾದಕರು ಮತ್ತು ಕತೆಗಾರರು ಎಸ್. ಗಂಗಾಧರಯ್ಯನವರು ಶೆಟ್ಟೀಕೆರೆ ತವುಲ ಮಾಕುವಳ್ಳಿಯವರು. ಹಾಲ್ಕುರಿಗೆ ಅಮಾನಿಕೆರೆ ಸುವರ್ಣ ನದಿ ಉಗಮವಾಗುವ ಜಾಗ ದಾಟಿದರೆ ಅದರಾಚೆಯ ಮೂಡ್ಲಾಗಿ ಕೆಳ ನೆಲದ ಹಾದಿಗುಂಟಾ ಹೋದರೆ ಮಾಕುವಳ್ಳಿ ಹಾದಿ. ದಿಬ್ಬ ಹತ್ತಿದರೆ ಮಾಕುವಳ್ಳಿ ಗೊಲ್ಲರ ಹಟ್ಟಿ. ಓಟು ದೂರದಲ್ಲೇ ಕಾಲ್ದಾರಿಯಲ್ಲೇ ಹೋದರೆ ಮಾಕುವಳ್ಳಿ ಗ್ರಾಮಠಾಣ. ಅತ್ತಮಖನಾಗಿ ಪಡುಲಾಗಿ ಪಟ್ಟದ ದೇವರಕೆರೆ, ಕರ್ನಾಟಕ ರಾಜ್ಯ ಮೀಸಲು ಅರಣ್ಯ ಮತ್ತು ಅಮೃತ್ ಮಹಲ್ ಕಾವುಲು. ಪ್ರಸಿದ್ದ ಜಾನುವಾರು ತಳಿ ಪರಂಪರೆಯ ಹುಲ್ಲುಗಾವಲು. ಬೋರನ ಕಣಿವೆ ಜಲಾಶಯಕ್ಕೆ ಬಳ್ಳಿ ಬಳ್ಳಿಯಾಗಿ ಹರಿದಿರುವ ನೂರಾರು ಹಳ್ಳಗಳು. ಸಾಲಳ್ಳಿಗಳ ತಡಾದು ಬೆಳೆದಿರುವ ಸಾಲುಕೆರೆಗಳ ಸರಮಾಲೆಯೊಳಗೆ ಪೂರ್ವಿಕರು ಹಿಡಿಗಂಟು ಕಟ್ಟಿ ಇಟ್ಟಂತಹ ಜಲಕಾಯಗಳು. 

ಮಾಕುವಳ್ಳಿ ಈಶಾನ್ಯಕ್ಕೆ ಚಿಕ್ಕನಾಯ್ಕನಹಳ್ಳಿ, ನೈರುತ್ಯಕ್ಕೆ ಮಂಚೆಕಲ್ಲು ಬೆಟ್ಟದ ಹಾದಿ. ಹಾದಿನಾಯ್ಕನಹಳ್ಳಿ ಅಳಲೆಕಾಯಿ ವನದ ಮುಂದಲ ಹಾದಿ ಒಳಗೇ ಬರೋ ತಿಪಟೂರು. ಬೂದಾಳು ಮೂಲೆಗೆ ಜಾಲಗಿರಿ ದಿಬ್ಬ. ಕುಪ್ಪೂರು ಗುಡ್ಡ ದಾಟಿದರೆ ಇವರು ವೃತ್ತಿ ಬದುಕು ಪೂರೈಸಿದ ಕಾಲೇಜು. ಇವುಗಳನ್ನೆಲ್ಲಾ ಅಡವು ಮಾಡಿಕೊಂಡವುಗಳ ಹಾಗೆ ಇವರ ಹಲವಾರು ಕತೆಗಳು ಮೂಡುತ್ತಾ, ಮೈದಾಳಿ ಬೆಳೆಯುತ್ತಾ ಹೋಗುತ್ತವೆ. ಇದೇ ಪಾಸಲೆಯ ಜನರ ಬದುಕಿನ ಭಾಷೆಯೂ ಇವರ ಕತೆಗಳಲ್ಲಿ ಬಳಕೆಯಾಗುತ್ತದೆ. 

ತತ್ವಪದಕಾರ ಚುಂಗದಹಳ್ಳಿ ಶಿವಪ್ಪ ಮತ್ತು ಶೆಟ್ಟೀಕೆರೆ ಕಾರಬ್ಬದ ಹಾಗೆಯೇ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಎಸ್. ಗಂಗಾಧರಯ್ಯನವರ ಹೆಸರೂ ಒಕ್ಕಬಳಕೆಯಾಗಿದೆ. ತತ್ವಪದ ರಚನೆಕಾರ ಚುಂಗದಹಳ್ಳಿ ಶಿವಪ್ಪನವರು ಈ ಪಾಸಲೆಯವರೆ. 

ವೈಕಂ ಗಂಗಾಧರಯ್ಯ ಎಂತಲೇ ಸಾಹಿತ್ಯ ರಂಗದಲ್ಲಿ ಮೊದಮೊದಲು ಹೆಸರುವಾಸಿಯಾದ ಇವರ “ವೈಕಂ ಕತೆಗಳು” ಅನುವಾದ ಕೃತಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ ಪ್ರಶಸ್ತಿ ದಶಕದ ಹಿಂದೆಯೇ ಬಂದಿತ್ತು. ಕನ್ನಡ ಸಾಹಿತ್ಯದಲ್ಲಿ ಕತೆಗಾರರಾಗಿ ನೆಲೆಯಾಗಿ ಗುರುತಿಸಿಕೊಂಡ ಇವರ ಇತ್ತೀಚಿನ ಕೃತಿ, ಈ ತನಕದ ಕತೆಗಳು “ಯರೆನೆತ್ತಿ” ಪ್ರಕಟವಾಯಿತು. ನವಿಲ ನೆಲ, ಒಂದು ಉದ್ದನೆಯ ನೆರಳು, ದೇವರ ಕುದುರೆ ಮತ್ತು ಮಣ್ಣಿನ ಮುಚ್ಚಳ ಕಥಾ ಸಂಕಲನಗಳು ‘ಯೆರೆನೆತ್ತಿ’ ಒಳಗೆ ಇವೆ.

‘ಯೆರೆ ನೆತ್ತಿ’ ಗುಣವಾದ ಅಪರೂಪದ ಭೌಗೋಳಿಕ ಸನ್ನಿವೇಶವೂ ಹೌದು. ಈ ತನಕದ ಕಥಾಸಂಕಲನವೂ ಹೌದು; ನಮ್ಮ ಸುತ್ತಿನೊಳಗೆ. ಯೆರೆನೆತ್ತಿ, ಯರೆದಿಬ್ಬ, ಯೆರೆನೆಲ, ಯೆರೆಕೆಬ್ಬೆ ಹೀಗೆಲ್ಲಾ ಕರೆಯಲಾಗುವುದು. ಬಿತ್ತಿದ ಬೀಜ, ಬಿದ್ದ ಕಾಯಿ, ಹುಲ್ಲು ಕಾಳುದೇಕುಲುವೆ ದೇಕಿಯಾದರೂ ಅಪರೂಪವಾಗಿ ಬೆಳೆಯುವ ಜಾಗ. ಹಾಗೇಯೇ ಕತೆಗಳೂ ನಿರೂಪವಾಗಿವೆ. ಅಪರೂಪವಾಗಿ ಒಂದು ಪಾಸಲೆಯ ಭೌಗೋಳಿಕ ಭೂಗುಣ ಮತ್ತು ಬಾಳಿಬದುಕಿದ ಪಾತ್ರಗಳನ್ನು ಯರೆನೆತ್ತಿ ಒಳಗೆ ಹಿರಿಯರಾದ ಗಂಗಾಧರಯ್ಯ ಇಸ್ರಾಂಬಾಗಿ ಬೆಳೆಸುವ ಮೂಲಕ ಕತೆಗಳ ನಿರ್ಮಾಣದಲ್ಲಿ ಕಾಣತೊಡಗಿದವರಾಗಿ ಪರಿಚಯಕ್ಕೆ ಬರತೊಡಗುವರು. ಓದುಗರಿಗೆ ಇವು ನಮ್ಮವೆ ಕತೆಗಳು; ಕಂಡ ಹಾಗೆ ಬರೆದಿದ್ದಾರಲ್ಲ? ಎನಿಸುವಷ್ಟರ ಮಟ್ಟಿಗೆ, ಅವರು ಕಥನಕಾಯಕದೊಳಗೆ ನಿರೂಪಿಸಿದ್ದಾರೆ. 

ವೈಕಂ ಕತೆಗಳು, ಸೀಬೆ ಸೊಗಡು, ಗುಲಾಭಿ ಗರ್ಭ, ಜಮೀಲಾ, ಚರಮಗೀತೆ, ನಾಟಕ ‘ಎರ್ಮಾ’, ಬೇಟೆಗಾರನ ಚಿತ್ರಗಳು, ಹಲವು ರೆಕ್ಕೆಯ ಹಕ್ಕಿ, ಬುನಿಯನ್ ಕತೆಗಳು ಇವುಗಳನ್ನೂ ಕನ್ನಡಕ್ಕೆ ತರುವಾಗ ಇವರ ಅನುವಾದಿತ ಕೃತಿಗಳು ಸ್ಥಳೀಯ ಭಾಷಾ ಹವಾಗುಣಕ್ಕೆ ಒಗ್ಗುವ ಹಾಗೆಯೇ ಇವೆ. 

ನಾಡಿನ ಹೆಸರಾಂತ ಕತೆಗಾರ ಎಸ್. ಗಂಗಾಧರಯ್ಯ ಅವರಿಗೆ ‘ಶಾ ಬಾಲೂರಾವ್’ ಪ್ರಶಸ್ತಿ ಬಂದಿರುವುದು ಹೆಮ್ಮೆಯ ಸಂಗತಿ. ನಾಡೆಲ್ಲಾ ಕನ್ನಡ ರಾಜ್ಯೋತ್ಸವ ಆಚರಿಸುವ ನವೆಂಬರ್ ತಿಂಗಳೂ ಒಂದು ವಿಶೇಷ ಸಂದರ್ಭ. 

ಹೋರಾಟ, ಅನುವಾದ, ಕೃಷಿ, ಮೇಷ್ಟ್ರು ಹೀಗೆಲ್ಲಾ ಆಗಿ, ಏಗುತ್ತಾ ಆಗಾಗ ಸಿಕ್ಕಿ ಮಾತನಾಡುವ ಎಸ್. ಗಂಗಾಧರಯ್ಯ ಅವರ ಜೊತೆಯಲ್ಲಿ ತಡಹೊತ್ತು ಕೂತು ಮಾತಾಡುವ ಎನಿಸುವಷ್ಟರ ಮಟ್ಟಿನ ಸಲುಗೆ. ಒಮ್ಮೊಮ್ಮೆ ಊಪ್ರುಕೆ ಮಾತಾಡಿ ಅರುಗಾಗುವುದೂ ಉಂಟು ಯಪ್ಪೆ ಮಾಡಿಕೊಂಡು. 

ಗೆಳೆಯರೊಂದಿಗೆ, ಹೋಗೋ ಬಾರೋ ಎನ್ನುತ್ತಲೇ ಒಂದು ಬೊಗಸೆ ನಗು ಚೆಲ್ಲಿ ಅವಸರಕ್ಕೆ ಬಸ್ಸತ್ತಿ ಕೆಲಸಕ್ಕೆ ಹೋಗುತಿದ್ದ ಮೇಷ್ಟ್ರು ಈಗ ಅವರಿಗೆ ನಿವೃತ್ತಿಯ ಇರಾಮವಾದ ಕಾಲವಾದರೂ; ಹಳ್ಳಿ ಹಾದಿ ಒಳಗಲ, ದಾರಿ ಒಬ್ಬೆಯ ಬೇಸಾಯದ ಬದುಕಿನ ಬೆನ್ನಾಡಿಯೇ ಇರುವರು. 

ಕಾದಂಬರಿ ಬರೆಯಲು ಗ್ರಾಮನಕಾಶೆಗಳಲ್ಲಿ ತಿರುಗಾಡುವ ಕ್ರಿಯಾಯೋಜನೆ ಸಿದ್ದಪಡಿಸಿಕೊಳ್ಳುವ ತವಕ ತಡಕಾಟದಲ್ಲಿದ್ದಾರೆ. ಅದಕ್ಕೂ ಮುಂಚೆ “ಆಸ್ಟ್ರೇಲಿಯಾದ ಅವಳು” ಇನ್ನೊಂದು ಇಂಬಾದ ಕತೆ ಬರೆಯಲೂ ಹೊಂಚಾಕುತ್ತಿರುವರು. ಆ ದಿನಗಳ ‘ಅವಳ’ ಜೊತೆಗಿನ ಬದುಕನ್ನು ಸಲೀಸಾಗಿ ಕನವರಿಸಿಕೊಂಡವರಂತೆ. ಒಂದು ನೆನಪಿನ ನೆಪವಾಗಿ ಕತೆ ಮುಂದುವರೆಯಬಹುದೇನೋ? 

ಶುಭಾಶಯಗಳು ಸಾರ್. 

ಉಜ್ಜಜ್ಜಿ ರಾಜಣ್ಣ

ಇದನ್ನೂ ಓದಿ-ಗಣಪತಿ ಪೂಜೆಗೆ ಸ್ವಾಮಿಗಳ ತಕರಾರು; ಭಾವನೆಗಳಿಗೆ ಧಕ್ಕೆಯೆಂದು ಧರ್ಮಾಂಧರ ದೂರು

ವಿಷಯಗಳು: #india #kannada #karnataka #peepal #peepalmedia
PPeepal Media

Peepal Media

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು