ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರೀತಿರಹಿತ ಅನುವಾದ ಯಾಂತ್ರಿಕ – ಪ್ರೊ.ಸಿ.ಎನ್.ರಾಮಚಂದ್ರನ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಅಂಕಣ, ಮೀಡಿಯಾ

• 1 ನಿಮಿಷದ ಓದು

ಪ್ರೀತಿರಹಿತ ಅನುವಾದ ಯಾಂತ್ರಿಕ – ಪ್ರೊ.ಸಿ.ಎನ್.ರಾಮಚಂದ್ರನ್

ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕನ್ನಡ ಭಾಷಾ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ‘ಕನ್ನಡ ಅನುವಾದ: ಹೊಸ ಸಾಧ್ಯತೆಗಳು’ ಎಂಬ ವಿಷಯದ ಕುರಿತಾದ ಒಂದು ವಾರದ ರಾಷ್ಟ್ರಮಟ್ಟದ ಆನ್‌ಲೈನ್ ಕಾರ್ಯಾಗಾರದಲ್ಲಿ ವಿಶ್ವವಿದ್ಯಾಲಯದ ಜಯಂತಿಯನ್ ಎಕ್ಸಟೆನ್ಷನ್ ಸರ್ವೀಸಸ್ ವಿಭಾಗದ ನಿರ್ದೇಶಕರಾದ ರೆ.ಫಾ.ಅನೂಪ್ ಕುರಿಯನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳು ತುಂಬಾ ಸಮೃದ್ಧವಾಗಿದೆ. ಮಾತೃಭಾಷೆ-ನೆಲ-ಸಂಸ್ಕೃತಿಯನ್ನು ಕುರಿತು ನಾವೆಲ್ಲರೂ ಸದಾ ಹೆಮ್ಮೆಯಿಂದ ನಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ವಿಮರ್ಶಕರಾದ ಡಾ.ಸಿ.ಎನ್.ರಾಮಚಂದ್ರನ್ ಅವರು, “ಅನುವಾದಕರು ಮೂಲ ಕೃತಿಯನ್ನು ಪ್ರೀತಿಸದೆ ಅನುವಾದ ಮಾಡಿದರೆ ಅದು ಯಾಂತ್ರಿಕ ಹಾಗೂ ಅಸಂತೋಷದಾಯಕವಾಗಿರುತ್ತದೆ” ಎಂದು ಹಿರಿಯ ಅಭಿಪ್ರಾಯಪಟ್ಟರು.
ಅನುವಾದವು ಮೂಲದಂತೆಯೇ ಯಶಸ್ವಿಯಾಗಿ ಆಗಬೇಕಾದರೆ ಅನುವಾದಕರು ಮೂಲ ಕೃತಿಯನ್ನು ಪ್ರೀತಿಸಬೇಕು. ಆ ತವಕ ಇದ್ದಾಗ ಮಾತ್ರ ಅನುವಾದವು ಮೂಲದಂತೆಯೇ ನಮ್ಮ ಸಂತೋಷವನ್ನೂ ಜ್ಞಾನವನ್ನೂ ಹೆಚ್ಚಿಸುತ್ತದೆ. ಇತ್ತೀಚೆಗೆ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನಗಳಿಂದ ಮಾಡಲಾಗುತ್ತಿರುವ ಅನುವಾದಗಳು ಸರಿಯಾದುವಲ್ಲ. ಯಂತ್ರಗಳಿಂದ ಮಾಡುವ ಅನುವಾದಗಳು ಯಾಂತ್ರಿಕವೇ ಆಗಿರುತ್ತವೆ. ಅವು ಎಂದೂ ಭಾವಾನಾತ್ಮಕವಾಗುವುದಿಲ್ಲ. ಅನುವಾದವು ಭಾವಾನಾತ್ಮಕವಾಗಿ ಆಗದಿದ್ದರೆ ಸಾಹಿತ್ಯ ಆಗುವುದಿಲ್ಲ. ಎಂದಿಗೂ ಯಾಂತ್ರಿಕ ಅನುವಾದಗಳು ಮಾನವೀಯ ಕಾರ್ಯಕ್ಕಿಂತ ಮಿಗಿಲಾದ ಸಾಧನೆಯನ್ನು ಮಾಡಲು ಅಸಾಧ್ಯ ಎಂದು ತಿಳಿಸಿದರು.

ಯಾವುದೇ ಭಾಷೆ ಮತ್ತು ಸಾಹಿತ್ಯವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಅನುವಾದ ಮಹತ್ವದ ಪ್ರಕ್ರಿಯೆಯಾಗಿದೆ. ಜಗತ್ತಿನ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಕಾಲಘಟ್ಟಗಳಲ್ಲಿ ನಡೆದಿರುವ ಅನುವಾದ ಪ್ರಕ್ರಿಯೆಯಿಂದ ಸ್ಥಳೀಯ ಭಾಷೆ-ಸಾಹಿತ್ಯಗಳು ಶ್ರೀಮಂತಗೊಂಡಿವೆ. ಯಾವ ಭಾಷೆಗಳು ತಮ್ಮ ಯುಗಮಾನದಲ್ಲಿ ರಾಜಮಾನ್ಯತೆಯನ್ನು ಪಡೆದುಕೊಂಡಿದ್ದವೋ ಅವುಗಳಿಂದ ಇತರ ಭಾಷೆಗಳಿಗೆ ಹಲವಾರು ಕೃತಿಗಳು ಅನುವಾದಗೊಂಡಿರುವುದನ್ನು ಚರಿತ್ರೆಯಲ್ಲಿ ಕಾಣಬಹುದಾಗಿದೆ. ಪ್ರಪಂಚದ ಭಾಷೆಗಳು ಹಲವು ಕಾರಣಗಳಿಂದ ಸಮಾನವಾಗಿ ಹಾಗೂ ಪ್ರಬುದ್ಧವಾಗಿ ಬೆಳೆದಿಲ್ಲದಿರುವುದರಿಂದ ಅನುವಾದಗಳ ಮೂಲಕ ಪ್ರತಿಯೊಂದು ಭಾಷೆಯೂ ತನ್ನನ್ನು ಮತ್ತಷ್ಟು ಸಂಪನ್ನಗೊಳಿಸಿಕೊಳ್ಳುವುದು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥರೂ ಕಾರ್ಯಾಗಾರದ ಪ್ರಧಾನ ಸಂಯೋಜಕರೂ ಆದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯಾಗಾರದ ಸಂಯೋಜಕರೂ ಕನ್ನಡ ಪ್ರಾಧ್ಯಾಪಕರಾದ ಡಾ.ಎಂ.ಭೈರಪ್ಪ ಅವರು ನಿರ್ವಹಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ ಹಾಗೂ ಡಾ.ಕಿರಣಕುಮಾರ್ ಎಚ್.ಜಿ ಉಪಸ್ಥಿತರಿದ್ದರು. ಕರ್ನಾಟಕದ ವಿವಿಧ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ ಪ್ರಾಧ್ಯಾಪಕರು, ಸಂಶೋಧಕರು, ಸಾಹಿತಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು