ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜನಪದ ರಾಜ್ಯೋತ್ಸವ ಪ್ರಶಸ್ತಿಗೆ ರಾಯಚೂರು ಜಿಲ್ಲೆಯ ಅಲೆಮಾರಿಗಳ ಸಾಂಸ್ಕೃತಿಕ ರಾಯಭಾರಿ ಬುರ್ರಕಥಾ ಕಮಲಮ್ಮ ಭಾಜನ…!

PPeepal Media Desk

Peepal Media Desk • ಅಂಕಣ

• 1 ನಿಮಿಷದ ಓದು

ಜನಪದ ರಾಜ್ಯೋತ್ಸವ ಪ್ರಶಸ್ತಿಗೆ ರಾಯಚೂರು ಜಿಲ್ಲೆಯ ಅಲೆಮಾರಿಗಳ ಸಾಂಸ್ಕೃತಿಕ ರಾಯಭಾರಿ ಬುರ್ರಕಥಾ ಕಮಲಮ್ಮ ಭಾಜನ…!

ರಾಯಚೂರು ನ.08: ಕರ್ನಾಟಕದ ಬುಡಕಟ್ಟು ಜಾನಪದ ಅಧ್ಯಯನ, ಸಂಶೋಧನೆ, ಉಳಿವುಗಾಗಿ ತಮ್ಮ ಬದುಕನ್ನೇ ಮುಡಿಪಿಟ್ಟ ನಾಡಿನ ಖ್ಯಾತ ವಿದ್ವಾಂಸ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭ ಮತ್ತು ಬುಡಕಟ್ಟು ಕಲೆಗಳನ್ನು ಆ ವೇದಿಕೆಗೆ ಕರೆತಂದು ಪ್ರಚಾರ ಮತ್ತು ನಾಡಿನ ಮುಖ್ಯವಾಹಿನಿಗೆ ಅವರೆಲ್ಲರನ್ನೂ ಪರಿಚಯ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡು ವಿಶೇಷವಾದ ಹಿ.ಚಿ ಹಬ್ಬ ಅಥವಾ ಹಿ.ಚಿ ಸಂಭ್ರಮ ಬುಡಕಟ್ಟು ಜಾನಪದ ಸಂಪತ್ತಿಗೆ 70 ವರ್ಷ ಎಂಬ ಧ್ಯೇಯವಿಟ್ಟುಕೊಂಡು ಹಾಗೆಯೇ ಈ ಸಂದರ್ಭದಲ್ಲಿ ವಿಶೇಷವಾಗಿ ನೆಲಮೂಲ ಸಂಸ್ಕೃತಿಯ ಪ್ರತಿಬಿಂಬದ ಪ್ರತಿನಿಧಿಗಳಿಗೆ ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಜನಪದ ಸಿರಿಯ ಜರಗನಹಳ್ಳಿ ಕಾಂತರಾಜು ತಿಳಿಸಿದರು.

ರಾಜ್ಯದಲ್ಲಿ ಇದುವರೆಗೂ ಯಾರು ಕೂಡ ಜಾನಪದ ಕಲಾವಿದರಿಗೆ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಕೊಡತಕ್ಕಂತಹ ಮನಸ್ಥಿತಿ, ಧೈರ್ಯ, ಸಾಹಸ ಮಾಡಿರಲಿಲ್ಲ. ಅದಾಗ್ಯೂ ಜನಪದ ಸಿರಿ ಕನ್ನಡ ವಾಹಿನಿಯು ಜನಪದ ಕಲಾವಿದರು ಅನ್ಯಾಯ, ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದನ್ನು ಮನಗಂಡು ಈ ರೀತಿ ಮುಂಚೂಣಿಯಾಗಿ ಕಲಾವಿದರನ್ನು ಮುನ್ನೆಲೆಗೆ ತರಬೇಕೆಂದು ತಮಗೆ ಸಿಕ್ಕ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಕಲಾವಿದರಿಗೆ ಅನುಕೂಲವಾಗುವಂತಹ ಕೆಲಸವನ್ನು ಮಾಡುತ್ತಿದ್ದಾರೆ. ಅದರಲ್ಲೂ ಮೂಲ ಜನಪದ ಕಲಾವಿದರಿಗೆ ಗೌರವ ಸಲ್ಲಬೇಕೆಂಬ ಆಶಯವನ್ನಿಟ್ಟುಕೊಂಡು ಈ ವರ್ಷದಿಂದ ಕೊಡಮಾಡಲ್ಪಡುತ್ತಿರುವ ಜಾನಪದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಡಲು ಮುಂದಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಹತ್ತು ಬುಡಕಟ್ಟು ಜನಾಂಗದ ಜನಪದ ಕಲಾತಂಡಗಳಿಗೆ ಕೊಡುತ್ತಿರುವುದು ಶ್ಲಾಘನೀಯ ಕಾರ್ಯ ಜೊತೆಗೆ ಆಯ್ದ ಕಲಾವಿದರಿಗೆ ಪ್ರಶಸ್ತಿ ಕೊಡುತ್ತಿರುವುದು ಮಾದರಿಯ ಕೆಲಸ ಅದರಲ್ಲೂ ರಾಯಚೂರು ಜಿಲ್ಲೆಯ ಅಲೆಮಾರಿಗಳ ಸಾಂಸ್ಕೃತಿಕ ರಾಯಭಾರಿ ಹಟ್ಟಿ ಪಟ್ಟಣದ ಹಿರಿಯ ಜನಪದ, ಬುರ್ರಕಥಾ ಕಲಾವಿದೆ ಬುರ್ರಕಥಾ ಕಮಲಮ್ಮ ಈ ಪಟ್ಟಿಯಲ್ಲಿರುವುದು ವಿಶೇಷ ಗಮನಾರ್ಹವಾಗಿದೆ.

ಮೂಲ ಜನಪದವನ್ನು ಉಳಿಸುತ್ತಾ, ಬೆಳೆಸುತ್ತಾ ಬರುತ್ತಿರುವಂತಹ ಬುಡಕಟ್ಟು, ಅಲೆಮಾರಿ ಸಮುದಾಯಗಳ ಜಾನಪದ ಕಲಾವಿದರಿಗೆ, ತಂಡಗಳಿಗೆ ಅತಿ ಹೆಚ್ಚಿನ ಪ್ರಶಸ್ತಿಗಳು ಈ ಬಾರಿ ಲಭಿಸುತ್ತಿರುವುದು ಖುಷಿಯ ಸಂಗತಿ. ಒಬ್ಬ ಜನಪದ ಕಲಾವಿದ, ಬರೀ ಜಾನಪದ ಕಲಾವಿದ ಅಲ್ಲ; ನಮ್ಮ ಸಂಸ್ಕೃತಿಯ ಮೂಲ ಆಶಯಗಳ ಪ್ರತಿಬಿಂಬ” ಹಾಗಾಗಿ ಈ ತರಹದ ವಿಷಯಗಳನ್ನು ಜನರಿಗೆ ಮುಟ್ಟಿಸುವ ಅವಶ್ಯಕತೆ ಹೆಚ್ಚು ಇದೆ‌ ಹಾಗಾಗಿ ಮಡಿಕೇರಿ ತಾಲೂಕು ಕುಶಾಲನಗರದ ವೀರಭೂಮಿ ಜಾನಪದ ಗ್ರಾಮದಲ್ಲಿ ನವೆಂಬರ್ 09 ರಂದು ಕನ್ನಡದ ಪ್ರಖ್ಯಾತ ದೇಸಿ ವಾಹಿನಿ ಜನಪದ ಸಿರಿ ಈ ಕಾರ್ಯಕ್ರಮ ಆಯೋಜಿಸಿದೆ ಎಂದು ಜ‌ನಪದರ ಗಟ್ಟಿಧ್ವನಿ ಜರಗನಹಳ್ಳಿ ಕಾಂತರಾಜು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ಎಸ್.ವಿ ಸುರೇಶ್ ಕುಲಪತಿಗಳು ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ಪ್ರೊ. ಟಿ.ಎಂ ಭಾಸ್ಕರ ಕುಲಪತಿಗಳು ಜಾನಪದ ವಿಶ್ವವಿದ್ಯಾಲಯ ಹಾವೇರಿ, ಪ್ರೊ. ನಾಗೇಶ್ ವಿ ಬೆಟ್ಟಕೋಟೆ ಕುಲಪತಿಗಳು ಡಾ. ಗಂಗುಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ಮೈಸೂರು, ಶ್ರೀ ಗೊಲ್ಲಹಳ್ಳಿ ಪ್ರಸಾದ್ ಅಧ್ಯಕ್ಷರು ಜಾನಪದ ಅಕಾಡೆಮಿ, ಡಾ. ಎ.ಆರ್ ಗೋವಿಂದಸ್ವಾಮಿ ಅಧ್ಯಕ್ಷರು ಬಂಜಾರ ಅಕಾಡೆಮಿ, ಡಾ. ಕಾಳೇಗೌಡ ನಾಗವಾರ, ಜನಾರ್ಧನ ಜನ್ನಿ, ಡಾ. ಕುರುವ ಬಸವರಾಜ್, ಪದ್ಮಶ್ರೀ ಡಾ. ರಾಣಿ ಮಾಚಯ್ಯ, ಎಂ. ಪ್ರಕಾಶಮೂರ್ತಿ ಕಸಾಪ ಅಧ್ಯಕ್ಷರು ಬೆಂಗಳೂರು ನಗರ, ಜಗದೀಶ್ ಮಲ್ನಾಡ್ ಸೇರಿದಂತೆ ಮತ್ತೀತರ ಗಣ್ಯರು ಉಪಸ್ಥಿತರು ಇರಲಿದ್ದಾರೆ.

PPeepal Media Desk

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು