ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇವರ ನಾಡಲ್ಲಿ ದಕ್ಲಕಥಾ ತಾಯಿ…!

PPeepal Media

Peepal Media ಅಂಕಣ

• 1 ನಿಮಿಷದ ಓದು

<strong>ದೇವರ ನಾಡಲ್ಲಿ ದಕ್ಲಕಥಾ ತಾಯಿ…!</strong>

ಇದೇ ಫೆಬ್ರವರಿ 11ನೇ ತಾರೀಕು, ನಮ್ಮ ಕನ್ನಡ ನೆಲದ ಕಥೆ, ಜನರ ಕಥೆಯಾಗಿರುವ ‘ದಕ್ಲಕಥಾ ದೇವಿಕಾವ್ಯ’ ಕೇರಳದಲ್ಲಿ  ನಡೆಯುವ ಪ್ರತಿಷ್ಠಿತ ಅಂತರರಾಷ್ಟ್ರೀಯ ನಾಟಕೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿದೆ(ITFOk). ಕೆ ಬಿ ಸಿದ್ದಯ್ಯರವರ ಗಲ್ಲೆಬಾನಿ, ಅವರ ಇತರ ಖಂಡಕಾವ್ಯ ಮತ್ತು ಕಥನಗಳಿಂದ ಆಯ್ದು ಬರಹವನ್ನು ಆಧರಿಸಿ ಈ ನಾಟಕವನ್ನು ರಚಿಸಿ, ನಿರ್ದೇಶಿಸಿದವರು ಯುವ ನಿರ್ದೇಶಕ ಲಕ್ಷ್ಮಣ್ ಕೆ ಪಿ. ಕೇರಳದ ತ್ರಿಶೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ನಾಟಕೋತ್ಸವದಲ್ಲಿ 10 ಅಂತಾರಾಷ್ಟ್ರೀಯ ನಾಟಕಗಳು, 14 ಭಾರತದ ವಿವಿಧ ರಾಜ್ಯಗಳಿಂದ ಆಯ್ಕೆಗೊಂಡಿರುವ ನಾಟಕಗಳ ಜೊತೆ ನಮ್ಮ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಕೈಕ ನಾಟಕ ಈ ‘ದಕ್ಲಕಥಾ ದೇವಿಕಾವ್ಯ’.

ಹೊಸ ರಂಗ ಪರಿಭಾಷೆಯನ್ನು ಬಹಳ ಜತನದಿಂದ ಕಟ್ಟಿ, ಯಾವುದೇ ಅಬ್ಬರವಿಲ್ಲದೆ ಹಿತಮಿತವಾದ ಸಂಗೀತ ಹಾಗೂ minimalistic stage design ಈ ನಾಟಕದ ಮೆರಗು. ಕೇವಲ ಆಧ್ಯಾತ್ಮಿಕ ಪುರಾಣ ಕಥೆಗಳಿಗೆ ಜೋತು ಬಿದ್ದಿರುವ ಈ ಸಮಯದಲ್ಲಿ ವಿಶಿಷ್ಟವಾದ ಒಂದು ಕಥೆಯನ್ನು ರಂಗರೂಪಕ್ಕೆ ತಂದಿರುವುದು, ಸಿದ್ಧ ಮಾದರಿಯನ್ನು ಮುರಿದು ನಟರ ಅಭಿವ್ಯಕ್ತಿಗೆ ಹೆಚ್ಚು ಪ್ರಾಶಸ್ತ್ಯವನ್ನು ನೀಡಿ, ನಿರಾಕಾರದಿಂದ ಒಂದು ಆಕಾರವನ್ನು ಸೃಷ್ಟಿಸಿದ ನಿರ್ದೇಶಕರ ಸೃಜನಶೀಲತೆ ಬಹಳ ಮೆಚ್ಚುವಂತದ್ದು.

 ಮೇಲು ಕೀಳು ಕೇವಲ ಜನರನ್ನು. ಒಂದು ಜನಾಂಗವನ್ನು ಮಾತ್ರ ದೂರವಿಟ್ಟಿಲ್ಲ. ಅವರ ಆಚರಣೆ, ಬದುಕು, ಕಥೆ ಹಾಗೂ ಅವರ ಸಂಗೀತ ಪರಿಕರಗಳನ್ನು ದೂರವಿಟ್ಟಿದೆ. ಇಂತಹ ನೆಲ ಮೂಲದ ತಮಟೆ, ಅರೆ ವಾದ್ಯಗಳನ್ನು ರಂಗದ ಮೇಲೆ ತಂದು ಸೂಕ್ಷ್ಮಾತಿಸೂಕ್ಷ್ಮ ನಾದಲಯದೊಂದಿಗೆ ಮನುಷ್ಯನ ವಿಕಾರಗಳನ್ನು, ನೋವು-ಹಸಿವನ್ನು, ಮಣ್ಣು ಹೆಣ್ಣನ್ನು, ಮುಟ್ಟು-ಹುಟ್ಟನ್ನು ಕೆದಕುವ ಪರಿ ಎಲ್ಲೋ ನಮ್ಮನ್ನೇ ಅಣಕಿಸುವಂತಿತ್ತು. ಶಿಷ್ಟ ಜಗತ್ತಿನ ಸಾತ್ವಿಕರ ನಡುವೆ ಹಸಿವೆಂಬ ಮಹಾಮಾರಿ ನಮ್ಮೆಲ್ಲರನ್ನು ಆವರಿಸಿಕೊಳ್ಳುವ, ನಾನು, ನನ್ನದು ಎನ್ನುವ ಅಹಂಗೆ ಕೆಣಕುವಂತಿದೆ. 

ಇಡೀ ನಾಟಕವನ್ನು ಪದದಲ್ಲಿ ಕಟ್ಟಲು ಕಷ್ಟ. ನೋಡಿಯೇ ಅನುಭವಿಸಬೇಕು. ಕನ್ನಡ ನುಡಿಯನ್ನ ಗಡಿಗಳಾಚೆ ಪಸರಿಸುತ್ತಿರುವ ಈ ತಂಡಕ್ಕೆ ಅಭಿನಂದನೆಗಳು. ಇನ್ನೂ ಹಲವು ರಾಷ್ಟ್ರೀಯ- ಅಂತಾರಾಷ್ಟ್ರೀಯ ನಾಟಕೋತ್ಸವಗಳಲ್ಲಿ  ಭಾಗಿಯಾಗುವ ಅವಕಾಶಗಳು ಸಿಗುವಂತಾಗಲಿ.

Photo courtesy- Aravind Kudla

ಮನೋಜ್ ಕುಮಾರ್

ರಂಗ ನಟ

ವಿಷಯಗಳು: #india #kannada #karnataka #peepal #peepalmedia
PPeepal Media

Peepal Media

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು