ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಮೂಲ್ ಹಾಲು ಮಾರಾಟದ ವಿರುದ್ಧ ರೊಚ್ಚಿಗೆದ್ದ ಕರವೇ | ಅಮೂಲ್ ಹಾಲು, ಅಮೂಲ್ ಉತ್ಪನ್ನಗಳನ್ನು ಬೀದಿಗೆಸೆದು  ಪ್ರತಿಭಟನೆ

PPeepal Media Desk

Peepal Media Desk • ಅಂಕಣ

• 1 ನಿಮಿಷದ ಓದು

ಅಮೂಲ್ ಹಾಲು ಮಾರಾಟದ ವಿರುದ್ಧ ರೊಚ್ಚಿಗೆದ್ದ ಕರವೇ | ಅಮೂಲ್ ಹಾಲು, ಅಮೂಲ್ ಉತ್ಪನ್ನಗಳನ್ನು ಬೀದಿಗೆಸೆದು  ಪ್ರತಿಭಟನೆ

ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. 

ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮೂಲ್ ಉತ್ಪನ್ನಗಳನ್ನು ಬೀದಿಗೆಸೆದು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಅಮೂಲ್ ಹಾಲು-ಮೊಸರು ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಇಂದು ಬೆಳಿಗ್ಗೆ ಮೈಸೂರು ಬ್ಯಾಂಕ್ ವೃತ್ತದ ಬಳಿ ನೆರೆದು ಅಮೂಲ್ ವಿರುದ್ಧ ಘೋಷಣೆಗಳನ್ನು ಕೂಗಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯ ಉಪಾಧ್ಯಕ್ಷ ದಾ.ಪಿ.ಆಂಜನಪ್ಪ ಅಮೂಲ್ ಸಂಸ್ಥೆ ಕನ್ನಡಿಗರ ಭಾವನೆಗಳೊಂದಿಗೆ ಆಟವಾಡುತ್ತಿದೆ. ಕನ್ನಡಿಗರು ಕಟ್ಟಿದ ಹೆಮ್ಮೆಯ ಸಂಸ್ಥೆ ಕೆಎಂಎಫ್ (ನಂದಿನಿ). ಅದನ್ನು ನಾಶಪಡಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಕೇಂದ್ರ ಸರ್ಕಾರ ನಂದಿನಿಯನ್ನು ಅಮೂಲ್ ನೊಂದಿಗೆ ವಿಲೀನಗೊಳಿಸಲು ಯತ್ನಿಸುತ್ತಿದೆ. ಇಂಥದ್ದೇನಾದರೂ ನಡೆದರೆ ಕರ್ನಾಟಕದ ಜನತೆ ದಂಗೆ ಏಳುತ್ತಾರೆ ಎಂದೂ ಎಚ್ಚರಿಸಿದರು. 

ಕರ್ನಾಟಕ ರಕ್ಷಣಾ ವೇದಿಕೆ ಯುವಘಟಕದ ರಾಜ್ಯಾಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ ಮಾತನಾಡಿ, ಅಮೂಲ್ ಹಠಮಾರಿತನ ಮುಂದುವರೆಸಿ ಹಾಲು-ಮೊಸರು ವ್ಯಾಪಾರ ಮುಂದುವರೆಸಿದರೆ ಕರ್ನಾಟಕದಲ್ಲಿ ಅಮೂಲ್ ನ ಎಲ್ಲ ಉತ್ಪನ್ನಗಳಿಗೂ ಬಹಿಷ್ಕಾರ ಹಾಕಬೇಕಾಗುತ್ತದೆ. ಅಮೂಲ್ ಐಸ್ ಕ್ರೀಂ ನಿಂದ ಹಿಡಿದು ಬಿಸ್ಕೆಟ್ ವರೆಗೆ ಯಾವ ಉತ್ಪನ್ನವನ್ನೂ ಮಾರಾಟ ಮಾಡಲು ಬಿಡುವುದಿಲ್ಲ‌. ಹೀಗಾಗಿ ಅಮೂಲ್ ಕೂಡಲೇ ಹಾಲು, ಮೊಸರು ವ್ಯಾಪಾರ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ಸಂದರ್ಭದಲ್ಲಿ ಅಮೂಲ್ ಭೂತದಹನ ಮಾಡಲು ಕಾರ್ಯಕರ್ತರು ಮುಂದಾದಾಗ ಪೊಲೀಸರು ಅಡ್ಡಿಪಡಿಸಿದರು. ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರ ವಿರೋಧದ ನಡುವೆಯೂ ಭೂತದಹನಕ್ಕೆ ಮುಂದಾದ ಕರವೇ ಕಾರ್ಯಕರ್ತರನ್ನು ಬಂಧಿಸಲಾಯಿತು.

VIDEO- ನಂದಿನಿ ನುಂಗಲು ಹೊರಟ ಅಮಿತ್‌ ಷಾ ಗೆ ಕನ್ನಡಿಗರ ಮಾತಿನೇಟು

ಪೊಲೀಸರ ದೌರ್ಜನ್ಯದ ಕುರಿತು ಪ್ರತಿಕ್ರಿಯೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ನೂರಾರು ಕರವೇ ಕಾರ್ಯಕರ್ತರನ್ನು ಹೇಡಿ ಸರ್ಕಾರ ಪೊಲೀಸರನ್ನು ಮುಂದೆ ಬಿಟ್ಟು ಬಂಧಿಸಿದೆ. ನಿಮ್ಮ ದೌರ್ಜನ್ಯವನ್ನು ಸವಾಲಾಗಿ ಸ್ವೀಕರಿಸಲಿದ್ದೇವೆ. ರಾಜ್ಯದ ಮೂಲೆಮೂಲೆಗಳಲ್ಲೂ ಹೋರಾಟ ಮೊಳಗಲಿದೆ. ಅದೆಷ್ಟು ಪೊಲೀಸರನ್ನು ಕಳಿಸುತ್ತೀರೋ ಕಳಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪ್ರತಿಭಟನೆಯಲ್ಲಿ ಕರವೇ ಮುಖಂಡರಾದ ಶ್ವೇತಾ ಮೋಹನ್, ಗೋಮೂರ್ತಿ ಯಾದವ್, ವೀರಭದ್ರ, ಕುಮಾರ್ (ಆಟೋ ಘಟಕ), ಕೆ.ಪಿ.ನರಸಿಂಹ, ಕಾರ್ತಿಕ್, ಲಕ್ಷ್ಮಿ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.‌

ವಿಷಯಗಳು: #india #kannada #karnataka #peepal #peepalmedia
PPeepal Media Desk

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು