ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾಳೆ ʼಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘʼಕ್ಕೆ ಚಾಲನೆ

P

Peepal Media • ಅಂಕಣ

• 1 ನಿಮಿಷದ ಓದು

ನಾಳೆ ʼಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘʼಕ್ಕೆ ಚಾಲನೆ

ಬೆಂಗಳೂರು: ನಾಳೆ ಅಂದರೆ ಏಪ್ರಿಲ್‌ 23ರಂದು ಸಂಜೆ ಚಿತ್ರಕಲಾ ಪರಿಷತ್ತಿನ ದೇವರಾಜ ಅರಸು ಗ್ಯಾಲರಿಯಲ್ಲಿ ʼಕರ್ನಾಟಕ ಪುಸ್ತಕ ಮಾರಾಟಗಾರರು,ಪ್ರಕಾಶಕರು ಹಾಗೂ ಲೇಖಕರ ಸಂಘʼ ಚಾಲನೆ ಪಡೆಯಲಿದೆ. ಕನ್ನಡ ಪುಸ್ತಕೋದ್ಯಮವನ್ನು ಬೆಳೆಸುವುದು ಮತ್ತು ಪುಸ್ತಕ ಮಾರಾಟಗಾರರು, ಪ್ರಕಾಶಕರು ಮತ್ತು ಲೇಖಕರ ನಡುವೆ ಸೇತುವೆಯಾಗಿ ಕೆಲಸು ಮಾಡುವುದು ಈ ಸಂಘಟನೆಯ ಉದ್ದೇಶವಾಗಿದೆ ಎಂದು ಸಂಘಟನೆಯ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಪುಸ್ತಕಗಳಿಗೆ ಓದುಗರ ಕೊರತೆ ಕಾಡುತ್ತಿದೆ. ಕನ್ನಡ ಪುಸ್ತಕೋದ್ಯಮವೂ ಹೊಸ ಆಲೋಚನೆಗಳ ಅಲಭ್ಯತೆ ಮತ್ತು ಸರ್ಕಾರ-ಸಂಸ್ಥೆಗಳ ಸಮರ್ಪಕ ಬೆಂಬಲವಿಲ್ಲದೆ ಸಂಕಷ್ಟದಲ್ಲಿದೆ. ಇಂಥ ಸನ್ನಿವೇಶದಲ್ಲಿ ತಮ್ಮ ಪುಸ್ತಕ ಪ್ರಕಟಿಸಬೇಕೆಂಬ ಆಶಯ ಇರುವ ಲೇಖಕರು, ಪುಸ್ತಕ ಮಾರಾಟವನ್ನೇ ಬದುಕಾಗಿಸಿಕೊಂಡ ದೂರದೂರುಗಳ ಪುಸ್ತಕ ಮಾರಾಟಗಾರರು ಹಾಗೂ ಸಣ್ಣ ಪ್ರಕಾಶಕರಿಗೆ ಸೂಕ್ತ ವೇದಿಕೆ ಕಲ್ಪಿಸಬೇಕೆಂಬ ಆಶಯದಿಂದ ಈ ಸಂಘವನ್ನು ಹುಟ್ಟು ಹಾಕಲಾಗುತ್ತಿದೆ.

ಸಂಘವು ಪುಸ್ತಕ ಪ್ರಕಾಶಕರು, ವಿತರಕರು ಮತ್ತು ಲೇಖಕರ ಮಧ್ಯೆ ಸಂಪರ್ಕ ಸೇತುವೆಯಂತೆ ಕಾರ್ಯ ನಿರ್ವಹಿಸುವ ಉದ್ದೇಶ ಹೊಂದಿದೆ. ವಿಚಾರಸಂಕಿರಣ, ಕಾರ್ಯಾಗಾರ, ತರಬೇತಿ ಮತ್ತು ಪ್ರಸಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು; ಇದಕ್ಕಾಗಿ ಪುಸ್ತಕ ಮೇಳ, ಪ್ರದರ್ಶನ ಹಮ್ಮಿಕೊಳ್ಳಲಾಗುತ್ತದೆ. ಸದಸ್ಯರ ಸಾಂಸ್ಕೃತಿಕ, ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸಾಂಸ್ಥಿಕ ಯೋಜನೆಗಳನ್ನು ರೂಪಿಸಲಾಗುತ್ತದೆ. ಅಂತಾರಾಷ್ಟ್ರೀಯ-ರಾಷ್ಟ್ರೀಯ ಹಾಗೂ ಪ್ರಾದೇಶಿಕ ಮಟ್ಟದಲ್ಲಿ ಪುಸ್ತಕ ಪ್ರದರ್ಶನ/ಮೇಳಗಳನ್ನು ಸರ್ಕಾರದ ನಾನಾ ಇಲಾಖೆಗಳು, ಸಾರ್ವಜನಿಕ ಸಂಸ್ಥೆಗಳು, ನಿಗಮ-ಮಂಡಳಿಗಳು, ಪ್ರಾಧಿಕಾರಗಳು ಹಾಗೂ ಸ್ವಯಂಸೇವಾ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳುವುದು ಹಾಗೂ ಅಂತಾರಾಷ್ಟ್ರೀಯ-ರಾಷ್ಟ್ರೀಯ ಹಾಗೂ ಪ್ರಾದೇಶಿಕ ಮಟ್ಟದಲ್ಲಿ ನಡೆಯುವ ಪುಸ್ತಕ ಪ್ರದರ್ಶನ/ಮೇಳಗಳಲ್ಲಿ ಪಾಲ್ಗೊಳ್ಳಲು ಸದಸ್ಯರಿಗೆ ನೆರವಾಗುವುದು ಸಂಘದ ಉದ್ದೇಶಗಳಲ್ಲಿ ಒಂದು. ಇದೆಲ್ಲವನ್ನೂ ಸಂಘಟನೆ ಮೂಲಕ, ಸಾಮೂಹಿಕ ಪ್ರಯತ್ನದ ಮೂಲಕ ಸಾಧ್ಯವಾಗಿಸುವ ಉದ್ದೇಶ ಹೊಂದಲಾಗಿದೆ. ಸಮಾನತೆ, ಸಮಸಮಾಜ ಮತ್ತು ಸಂವಿಧಾನ ನಮ್ಮ ಗುರಿಯಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುಸ್ತಕಗಳ ಕುರಿತು ವಿಶೇಷ ಉಪನ್ಯಾಸ

ಚಿಂತಕ ಡಾ. ರಹಮತ್‌ ತರಿಕೆರೆಯವರು ʼಸಮಕಾಲೀನ ಸಂದರ್ಭದಲ್ಲಿ ಪುಸ್ತಕಗಳುʼ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಹಿರಿಯ ಲೇಖಕಿ ಆರ್.‌ ಪೂರ್ಣಿಮಾ, ದಲಿತ ಮುಖಂಡ ಮಾವಳ್ಳಿ ಶಂಕರ್‌, ಆಕೃತಿ ಪ್ರಕಾಶನದ ಗುರುಪ್ರಸಾದ್‌ ಡಿ.ಎನ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಸವರಾಜ ಸೂಳಿಭಾವಿ, ಧನಂಜಯ್‌, ಮಾಧವ್‌ ಐತಾಳ್‌, ರಾಜೇಶ್ವರಿ, ಅಕ್ಷತಾ ಹುಂಚದಕಟ್ಟೆ, ವಿ.ಆರ್.ಕಾರ್ಪೆಂಟರ್‌, ಚಂದ್ರು ತುರಹುಣಸೆ, ಅನಿಲ್‌ ಚಿಕ್ಕದಳವಟ್ಟ ಮತ್ತು ನಿತೇಶ್‌ ಕುಂಟಾಡಿ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದ್ದಾರೆ.

P

Peepal Media

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version