ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕನ್ನಡಿಗರೇ ಕ್ಷಮಿಸಿ, ಕ್ಷಮಿಸಿ, ಕ್ಷಮಿಸಿ… ಅಂಗಲಾಚಿದ ಪ್ರಶಾಂತ್‌ ಸಂಬರ್ಗಿ

PPeepal Media

Peepal Media • ಅಂಕಣ

• 1 ನಿಮಿಷದ ಓದು

ಕನ್ನಡಿಗರೇ ಕ್ಷಮಿಸಿ, ಕ್ಷಮಿಸಿ, ಕ್ಷಮಿಸಿ… ಅಂಗಲಾಚಿದ ಪ್ರಶಾಂತ್‌ ಸಂಬರ್ಗಿ

ಬಿಡದಿ: ಬಿಗ್‌ ಬಾಸ್‌ ಶೋನಲ್ಲಿ ಕನ್ನಡ ಹೋರಾಟಗಾರರನ್ನು ಕೀಳಾಗಿ ನಿಂದಿಸಿದ್ದ ಸ್ಪರ್ಧಿ ಪ್ರಶಾಂತ್‌ ಸಂಬರ್ಗಿ ಎಂಬಾತ ಕನ್ನಡಿಗರ ಕ್ಷಮೆ ಯಾಚಿಸಿದ್ದಾನೆ.

ಕನ್ನಡಪರ ಹೋರಾಟಗಾರ ಮತ್ತು ಮತ್ತೋರ್ವ ಸ್ಪರ್ಧಿ ರೂಪೇಶ್‌ ರಾಜಣ್ಣ ಅವರೊಂದಿಗಿನ ಸಂಭಾಷಣೆ ಸಂದರ್ಭದಲ್ಲಿ ಕಳೆದ ಮಂಗಳವಾರ ಸಂಬರ್ಗಿ ಆಡಿದ್ದ ಮಾತುಗಳು ಕನ್ನಡಪರ ಹೋರಾಟಗಾರರನ್ನು ಕೆರಳಿಸಿದ್ದವು. ಈ ಸಂಬಂಧ ಬಿಗ್‌ ಬಾಸ್‌ ಸ್ಪರ್ಧೆ ನಡೆಯುತ್ತಿರುವ ಇಲ್ಲಿನ ಇನ್ನೋವೇಟಿವ್‌ ಫಿಲ್ಮ್‌ ಸಿಟಿ ಸಮೀಪ ಕನ್ನಡಪರ ಹೋರಾಟಗಾರರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ಬಿಗ್‌ ಬಾಸ್‌ ಶೋ ನಿರ್ಮಾಪಕರು ಬಿಗ್‌ ಬಾಸ್‌ ಶೋನ ಕನ್ಫೆಷನ್‌ ರೂಮಿಗೆ ಕರೆಸಿ, ಸಂಬರ್ಗಿ ಮಾತುಗಳು ಸೃಷ್ಟಿಸಿರುವ ವಿವಾದಗಳ ಕುರಿತು ವಿವರಿಸಿದರು.

ಕನ್ನಡ ಹೋರಾಟಗಾರರ ಕುರಿತು ನೀವು ಆಡಿರುವ ಮಾತು ಮತ್ತು ಅದರ ಧಾಟಿ ಭಾಷೆಯನ್ನು ಪ್ರೀತಿಸುವ ಅನೇಕರಿಗೆ ನೋವನ್ನುಂಟು ಮಾಡಿದೆ. ಭಾಷೆಯ ಪರವಾಗಿ ನಿಲ್ಲುವ ಅನೇಕ ಪ್ರಾಮಾಣಿಕ ಕನ್ನಡಿಗರು ನಮ್ಮ ನಡುವೆ ಇದ್ದಾರೆ ಎಂಬುದು ನಿಮ್ಮ ಅರಿವಿನಲ್ಲಿದೆ ಎಂದು ಬಿಗ್‌ ಬಾಸ್‌ ಭಾವಿಸುತ್ತಾರೆ ಎಂದು ಪ್ರಶಾಂತ್‌ ಸಂಬರ್ಗಿಗೆ ಹೇಳಲಾಯಿತು.

ಪ್ರಶಾಂತ್‌ ಸಂಬರ್ಗಿ ಕ್ಷಮೆಯಾಚಿಸುತ್ತಿರುವ ದೃಶ್ಯ

ಇದಕ್ಕೆ ಪ್ರತಿಕ್ರಿಯಿಸಿದ ಸಂಬರ್ಗಿ, ಮಾತಿನ ಭರದಲ್ಲಿ ಕನ್ನಡಪರ ಹೋರಾಟಗಾರರನ್ನು ನಿಂದಿಸಿದ್ದೇನೆ. ಅದಕ್ಕಾಗಿ ಕರ್ನಾಟಕದ ಜನತೆಯಲ್ಲಿ ಕ್ಷಮೆ ಕೇಳುತ್ತೇನೆ. ನನ್ನಿಂದ ತಪ್ಪಾಗಿದೆ. ನನಗೆ ಪಶ್ಚಾತ್ತಾಪವಾಗುತ್ತಿದೆ. ದಯವಿಟ್ಟು ಕ್ಷಮೆ ಇರಲಿ, ಕ್ಷಮೆ ಇರಲಿ, ಕ್ಷಮೆ ಇರಲಿ ಎಂದು ಅಂಗಲಾಚಿರುವ ವಿಡಿಯೋವನ್ನು ಕಲರ್ಸ್‌ ಕನ್ನಡ ಬಿಡುಗಡೆ ಮಾಡಿದೆ.

PPeepal Media

Peepal Media

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು