ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮನೆ ಯಜಮಾನಿಗೆ 2000 ರೂ: ಅರ್ಜಿ ಸಲ್ಲಿಸೋದು ಹೇಗೆ?

PPeepal Media Desk

Peepal Media Desk ಅಂಕಣ

• 1 ನಿಮಿಷದ ಓದು

ಮನೆ ಯಜಮಾನಿಗೆ 2000 ರೂ: ಅರ್ಜಿ ಸಲ್ಲಿಸೋದು ಹೇಗೆ?

ಈಗಾಗಲೇ ‘ಶಕ್ತಿ ಯೋಜನೆ’ ಹೆಸರಿನ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣವನ್ನು ಅನುಷ್ಠಾನಕ್ಕೆ ತಂದ ಕಾಂಗ್ರೆಸ್ ಸರ್ಕಾರ, ಈಗ ‘ಗೃಹಲಕ್ಷ್ಮಿ’ ಯೋಜನೆಗೆ ಮಾರ್ಗಸೂಚಿ ಹೊರಡಿಸಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿರುವ ಪ್ರಸ್ತಾವನೆಯಲ್ಲಿ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಯಾರು, ಯಾವ ರೀತಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು, ನಂತರ ಯಾವಾಗ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂಬ ಬಗ್ಗೆ ತಿಳಿಸಿದೆ.

ಮೇ 20 ರಂದು ಕರೆದ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ಕುಟುಂಬದ ಯಜಮಾನಿಗೆ 2,000 ರೂಪಾಯಿಯ ಮಾಸಿಕ ಭತ್ಯೆ ನೀಡುವ ಬಗೆಗಿನ ಪ್ರಸ್ತಾಪದಲ್ಲಿ ಒಂದಷ್ಟು ನಿಯಮಗಳನ್ನು ಹೊರಡಿಸಲಾಗಿದೆ. ಅದರಂತೆ

  • * ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆ ಈ ಯೋಜನೆಯ ಅರ್ಹ ಫಲಾನುಭವಿ ಆಗಿರುತ್ತಾರೆ.
  • * ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರು ಇದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸತಕ್ಕದ್ದು.
  • * ಯೋಜನೆಯ ಫಲಾನುಭವಿಗಳು ಇದೇ ಜೂನ್ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸಬಹುದು.
  • * ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಅಥವಾ ತಾವೇ ಖುದ್ದು ಅಧಿಕಾರಿಗಳ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
  • * ಯೋಜನೆಯ ಸೌಲಭ್ಯ ಪಡೆಯುವ ಅರ್ಜಿದಾರರ ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕಿದೆ.
  • * ಜುಲೈ 15 ರ ನಂತರ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ, ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು.
  • * ಅರ್ಜಿಯಲ್ಲಿನ ಅಂಶಗಳು ತಪ್ಪೆಂದು ಕಂಡುಬಂದಲ್ಲಿ ಅರ್ಜಿದಾರರು ಅಲ್ಲಿಯವರೆಗೆ ತಗೆದುಕೊಂಡ ಹಣವನ್ನು ವಸೂಲಿ ಮಾಡಿ, ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು.
  • * ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು‌.
  • * ಅರ್ಜಿಯನ್ನು ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಸೈಬರ್ ಕೆಫೆಗಳ ಮೂಲಕ ಸಲ್ಲಿಸಬಹುದು‌.
  • * ಭೌತಿಕವಾಗಿ ಅರ್ಜಿ ಸಲ್ಲಿಸುವವರು ತಮ್ಮ ಸಮೀಪದ ನಾಡ ಕಛೇರಿ ಮೂಲಕ ಅರ್ಜಿ ಸಲ್ಲಿಸಬಹುದು.
  • * ಗೃಹಲಕ್ಷ್ಮಿ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ಸಂಬಂಧಿಸಿದ ತಾಲ್ಲೂಕಿನ ಶಿಶು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಈ ಯೋಜನೆಯ ಅಧಿಕಾರಿಗಳು ಎಂದು ಮಂಜೂರಾತಿ ಪ್ರಾಧಿಕಾರದ ಅಧಿಕಾರಿಗಳೆಂದು ಪರಿಗಣಿಸಲಾಗಿದೆ.

ಅದರಂತೆ ಜೂನ್ 15 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 15 ಕ್ಕೆ ಕೊನೆಯ ದಿನವಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

PPeepal Media Desk

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು