ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಂದಿನಿ ಉಳಿಸಿ  ಪ್ರತಿಭಟನೆ |  ಮೈಸೂರಿನ ವಿವಿ ಪುರಂನಲ್ಲಿರುವ ಅಮುಲ್ ಮಾರಾಟ ಮಳಿಗೆಗೆ ತಟ್ಟಿದ ಬಿಸಿ

PPeepal Media Desk

Peepal Media Desk ಅಂಕಣ

• 1 ನಿಮಿಷದ ಓದು

ನಂದಿನಿ ಉಳಿಸಿ  ಪ್ರತಿಭಟನೆ |  ಮೈಸೂರಿನ ವಿವಿ ಪುರಂನಲ್ಲಿರುವ ಅಮುಲ್ ಮಾರಾಟ ಮಳಿಗೆಗೆ ತಟ್ಟಿದ ಬಿಸಿ

ನಗರ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಸೋಮವಾರ ನಡೆದ ‘ ನಂದಿನಿ ಉಳಿಸಿ’ ಪ್ರತಿಭಟನೆಯ ಬಿಸಿಗೆ ಮೈಸೂರಿನ ವಿವಿ ಪುರಂನಲ್ಲಿರುವ ಅಮುಲ್ ಮಾರಾಟ ಮಳಿಗೆ ಒಂದು ದಿನದ ಮಟ್ಟಿಗೆ ಮುಚ್ಚಲ್ಪಟ್ಟಿತು.

ನಂದಿನಿಯ ಕೆಚ್ಚಲಿಗೆ ಕೈ ಹಚ್ಚಿದರೆ ಕನ್ನಡಿಗರ ಕಿಚ್ಚನ್ನು ಎದುರಿಸಬೇಕಾದೀತು ಎಚ್ಚರ ಎಂದು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಪತ್ರಕರ್ತ ಟಿ.ಗುರುರಾಜ್, ಕನ್ನಡಿಗರ ಸಹನೆಯನ್ನು ಕೆಣಕಬೇಡಿ ಎಂದರು.

ಇಂದು ಸಾತ್ವಿಕವಾಗಿ ನಡೆದಿರುವ ಈ ಚಳವಳಿಯನ್ನು ಹಗುರವಾಗಿ ಪರಿಗಣಿಸಿದರೆ, ಗಂಭೀರ ಪರಿಣಾಮಗಳನ್ನು ಎದುರಿಸುವುದು ಅನಿವಾರ್ಯವಾಗುತ್ತದೆ ಮತ್ತು ಶಾಂತಿ, ಕ್ರಾಂತಿಯಾಗಿ ಮಾರ್ಪಡುವುದು ಅನಿವಾರ್ಯವಾಗುತ್ತದೆ ಎಂದ  ಗುರುರಾಜ್  ಭಾಷಾ ಚಳವಳಿಯನ್ನು ಮತ್ತೆ ಕಟ್ಟಲು ಇದು ಸಕಾಲ ಎಂದರು.

ಅಹಿಂದ ಸಂಘಟನೆಯ ಅಧ್ಯಕ್ಷ ಶಿವರಾಂ, ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿರುವ  ಭಾಜಪ ಸರ್ಕಾರ, ಈ ನೆಲದ ರೈತರನ್ನು ಸರ್ವನಾಶ ಮಾಡಲು ಮುಂದಾಗಿರುವುದು ದುರಂತ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

VIDEO – ನಂದಿನಿ ನುಂಗಲು ಹೊರಟ ಅಮಿತ್‌ ಷಾ ಗೆ ಕನ್ನಡಿಗರ ಮಾತಿನೇಟು

ಕಮ್ಯುನಿಸ್ಟ್ ಹೋರಾಟಗಾರ ಜಗನ್ನಾಥ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಚಿಂತಕ  ಪ್ರೊ  ಕಾಳಚಿನ್ನೇಗೌಡ, ಹೋರಾಟಗಾರ್ತಿ ಸವಿತಾ ಮಲ್ಲೇಶ್ ಮತ್ತಿತರರು ಮಾತನಾಡಿದರು.

ವಿವಿಧ ಸಂಘಟನೆಗಳನ್ನು ಪ್ರತಿನಿಧಿಸುವ ರಾಕೇಶ್, ಜೆ ಜೆ ಆನಂದ್, ಪ್ರಕಾಶ್ ಗೌಡ, ಜಮೀರ್ ಇಮ್ರಾನ್ ಪಾಷಾ, ಹರೀಶ್, ಮೊಗಣ್ಣಚಾರ್, ಯೋಗೇಶ್ ಉಪ್ಪಾರ್  ರವಿನಂದನ್, ನಾಗೇಶ್ ನೆಲೆಹಿನ್ನೆಲೆ ಗೋಪಾಲಕೃಷ್ಣ, ಮಹೇಂದ್ರ ಕಾಗಿನೆಲೆ ಮತ್ತಿತರರು ಪ್ರತಿಭಟನೆಗೆ ಸಾಕ್ಷಿಯಾದರು.

ವಿಷಯಗಳು: #india #kannada #karnataka #peepal #peepalmedia
PPeepal Media Desk

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು