ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭಾಗ್ಯಜ್ಯೋತಿ ಹಿರೇಮಠ ಗೆ ವಿಭಾ ಸಾಹಿತ್ಯ ಪ್ರಶಸ್ತಿ

PPeepal Media Desk

Peepal Media Desk • ಅಂಕಣ

• 1 ನಿಮಿಷದ ಓದು

ಭಾಗ್ಯಜ್ಯೋತಿ ಹಿರೇಮಠ ಗೆ ವಿಭಾ ಸಾಹಿತ್ಯ ಪ್ರಶಸ್ತಿ

2022 ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಯು ಭಾಗ್ಯಜ್ಯೋತಿ ಹಿರೇಮಠ ಅವರ ‘ಬಿದಿರ ಬಿನ್ನಹ’ ಎಂಬ

ಕವನ ಸಂಕಲನದ ಹಸ್ತಪ್ರತಿಗೆ ದೊರೆತಿದೆ.  ಕವಿ, ವಿಮರ್ಶಕರಾದ ಸ. ಉಷಾ ಮತ್ತು ಕೇಶವ ಮಳಗಿ ಅವರು

ಅಂತಿಮ ಸುತ್ತಿನ ಆಯ್ಕೆ ತೀರ್ಪುಗಾರರಾಗಿದ್ದರು.

 ‘ಸಮಕಾಲೀನ ವಿಚಾರಗಳ ಕಲಾತ್ಮಕ ಅಭಿವ್ಯಕ್ತಿ, ಬುದ್ದ ಗಾಂಧಿ ಬಸವ ಅಕ್ಕ ಇವರನ್ನಾರನ್ನೂ ನೇರವಾಗಿ ಹೆಸರಿಸದೇ ಅವರ ತಾತ್ವಿಕತೆಯನ್ನು ಮಾತ್ರ ಕಾವ್ಯವಾಗಿ ಕಟ್ಟುವ ಕಲೆಯನ್ನು ಮೈಗೂಡಿಸಿಕೊಂಡ ಬಗೆಗಾಗಿ ‘ಬಿದಿರ ಬಿನ್ನಹ’ ನಮ್ಮ ಆಯ್ಕೆ’ ಎಂದು ತೀರ್ಪುಗಾರರು ಅಭಿಪ್ರಾಯಪಟ್ಟಿದ್ದಾರೆ. ಈ ಪುರಸ್ಕಾರವು ಹತ್ತು ಸಾವಿರ ನಗದು ಹಾಗೂ ಪ್ರಶಸ್ತಿ ಪಲಕವನ್ನು ಒಳಗೊಂಡಿದೆ.

ವಿಭಾ

ಧಾರವಾಡ ಜಿಲ್ಲೆಯ ಗುಡಗೇರಿಯವರಾದ ಭಾಗ್ಯಜ್ಯೋತಿ ಹಿರೇಮಠರು ಎಂ,ಎ, ಎಂ.ಇಡಿ ಪದವೀಧರೆ. ಹಂಪಿ

ಕನ್ನಡ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಿನಿಮಾ ಹಾಡುಗಳ ಗೀತ ಮೀಮಾಂಸೆ” ಎಂಬ ವಿಷಯದ ಕುರಿತು ಈಗ

ಸಂಶೋಧನೆಯಲ್ಲಿ ನಿರತರು. ‘ಕನ್ನಡ ಚಲನಚಿತ್ರ ರಂಗಕ್ಕೆ ನರಸಿಂಹರಾಜು ಅವರ ಕೊಡುಗೆ’ ಎಂಬ ವಿಷಯದ

ಮೇಲೆ ನಡೆದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ ಹುಬ್ಬಳ್ಳಿಯ ಕೆ.ಎಲ್.ಇ

ಧ್ವನಿ ಎಫ್.ಎಂ. ಕೇಂದ್ರದಲ್ಲಿ ನಿರಂತರವಾಗಿ ಅನೇಕ ವಿಶಿಷ್ಟವಾದ ಕಾರ್ಯಕ್ರಮಗಳಿಗೆ ಧ್ವನಿಯಾಗಿದ್ದಾರೆ.

ಇವರ ಮೊದಲ ಕವನ ಸಂಕಲನ ‘ಪಾದಗಂಧ’, ಸಂಕ್ರಮಣ ಕಾವ್ಯ ಬಹುಮಾನ, ಕನ್ನಡ ಸಾಹಿತ್ಯ ಪರಿಷತ್ತು

ಕೊಡಮಾಡುವ ಕೆ.ವಿ.ರತ್ನಮ್ಮ ದತ್ತಿ ಪ್ರಶಸ್ತಿ, ಹಾಸನದ ಕಾವ್ಯ ಮಾಣಿಕ್ಯ ಪ್ರಶಸ್ತಿ, ರಾಜ್ಯ ಸಾಹಿತ್ಯ

ಅಕಾಡೆಮಿಯ ಮಧುರಚೆನ್ನ ದತ್ತಿ ಪ್ರಶಸ್ತಿ ಮುಂತಾದವುಗಳು ಇವರ ಕವಿತೆಗಳಿಗೆ ಲಭಿಸಿವೆ. ಕೃಷಿ, ಸಂಗೀತ,

ಸಿನಿಮಾ, ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿರುವ ಇವರು ಸದ್ಯ ಹುಬ್ಬಳ್ಳಿಯಲ್ಲಿ ವಾಸಿಸುತ್ತಿದ್ದಾರೆ.

ಪ್ರಶಸ್ತಿಯು ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.  ಮೇ 27 ಮತ್ತು 28 ರಂದು ವಿಜಯಪುರದಲ್ಲಿ ನಡೆವ 9ನೇ ಸಾಹಿತ್ಯ ಮೇಳದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇದನ್ನು ಓದಿದ್ದೀರಾ–https://peepalmedia.com/last-chance-to-save-basava-kuvempus-karnataka/ ಬಸವ ಕುವೆಂಪು ಅವರ ಕರ್ನಾಟಕ ಉಳಿಸಿಕೊಳ್ಳಲು ಕೊನೆಯ ಅವಕಾಶ

ವಿಷಯಗಳು: #india #kannada #karnataka #peepal #peepalmedia
PPeepal Media Desk

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು