ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕರಾವಳಿ ದರೋಡೆಕೋರ ಶಿವಾಜಿಯನ್ನು ಹೀರೋ ಮಾಡ್ತಾರಾ ರಿಷಬ್ ಶೆಟ್ಟಿ?

PPeepal Media Desk

Peepal Media Desk ಅಂಕಣ

• 2 ನಿಮಿಷದ ಓದು

ಕರಾವಳಿ ದರೋಡೆಕೋರ ಶಿವಾಜಿಯನ್ನು ಹೀರೋ ಮಾಡ್ತಾರಾ ರಿಷಬ್ ಶೆಟ್ಟಿ?

“..ಶಿವಾಜಿಗೆ ಇತಿಹಾಸದಲ್ಲಿ ಸ್ಥಾನವಿರಬಹುದು. ಆದರೆ ರಿಷಬ್ ಶೆಟ್ಟಿ ಹುಟ್ಟಿದ ಕರಾವಳಿಗೆ ಶಿವಾಜಿ ಒರ್ವ ವಿಲನ್, ದರೋಡೆಕೋರ !
1665 ರಲ್ಲಿ ಛತ್ರಪತಿ ಶಿವಾಜಿ ಬಸ್ರೂರಿನಲ್ಲಿ ದರೋಡೆ ನಡೆಸದೇ ಇದ್ದಲ್ಲಿ ಇವತ್ತು ಇಡೀ ಕರಾವಳಿ ಹೀಗಿರುತ್ತಿರಲಿಲ್ಲ. ಮುಂಬೈಯನ್ನೂ ಮೀರಿಸುವ ವಾಣಿಜ್ಯ ನಗರಿಯಾಗಿ ಇರುತ್ತಿತ್ತು..” ನವೀನ್ ಸೂರಿಂಜೆಯವರ ಬರಹದಲ್ಲಿ

ನಟ ರಿಷಬ್ ಶೆಟ್ಟಿ ಬಲಪಂಥೀಯ ಸಿದ್ದಾಂತವಾದಿ. ‘ಕಾಂತಾರ’ ದಲಿತರ ವಿರೋಧಿ ಮನಸ್ಥಿತಿಯ ಸಿನೇಮಾ. ಕರಾವಳಿಯ ಸಂಸ್ಕೃತಿಯ ಪರಿಚಯದ ನೆಪದಲ್ಲಿ ‘ದಲಿತರು ಕೋಣ ಸಾಕಿ, ಕಂಬಳ ಕ್ರೀಡೆಯಲ್ಲಿ ಭಾಗವಹಿಸಬಾರದು, ಕೋಲ ಕಟ್ಟುವುದಷ್ಟೆ ಅವರ ಕೆಲಸ’ ಎಂದು ಕಾಂತಾರ ಮೂಲಕ ನಯವಾಗಿ ಸಾರಲಾಯಿತು. ಈಗ ‘ಛತ್ರಪತಿ ಶಿವಾಜಿ’ ಸಿನೇಮಾ ಮೂಲಕ ರಿಷಬ್ ಬಲಪಂಥೀಯತೆಯ ಇನ್ನೊಂದು ಮುಖ ತೋರಿಸುತ್ತಿದ್ದಾರೆ.

ಶಿವಾಜಿಗೆ ಇತಿಹಾಸದಲ್ಲಿ ಸ್ಥಾನವಿರಬಹುದು. ಆದರೆ ರಿಷಬ್ ಶೆಟ್ಟಿ ಹುಟ್ಟಿದ ಕರಾವಳಿಗೆ ಶಿವಾಜಿ ಒರ್ವ ವಿಲನ್, ದರೋಡೆಕೋರ !
1665 ರಲ್ಲಿ ಛತ್ರಪತಿ ಶಿವಾಜಿ ಬಸ್ರೂರಿನಲ್ಲಿ ದರೋಡೆ ನಡೆಸದೇ ಇದ್ದಲ್ಲಿ ಇವತ್ತು ಇಡೀ ಕರಾವಳಿ ಹೀಗಿರುತ್ತಿರಲಿಲ್ಲ. ಮುಂಬೈಯನ್ನೂ ಮೀರಿಸುವ ವಾಣಿಜ್ಯ ನಗರಿಯಾಗಿ ಇರುತ್ತಿತ್ತು.

ಆಗ ಬಸ್ರೂರು ಕರಾವಳಿಯ ದೊಡ್ಡ ವಾಣಿಜ್ಯ ನಗರ. ಕ್ರಿಶ 12 ನೇ ಶತಮಾನದಲ್ಲಿ ಬಸ್ರೂರು ವೈಭವದ ಪಟ್ಟಣ. ತೆಂಗಿನಕಾಯಿ, ಅಕ್ಕಿ, ಕಾಳುಮೆಣಸು, ತಾಳೆ, ಲವಂಗ, ದಾಲ್ಚಿನಿ, ದವಸದಾನ್ಯಗಳು ಸೇರಿದಂತೆ ಕರಾವಳಿ ಮಲೆನಾಡಿಗರು ಬೆಳೆಯುತ್ತಿದ್ದ ಮಸಾಲ ಪದಾರ್ಥಗಳನ್ನು ಬಸ್ರೂರಿನ ಮೂಲಕ ವಿದೇಶಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಚೀನಾದಿಂದ ಪಾತ್ರೆ, ರೇಷ್ಮೆ ವಸ್ತ್ರಗಳನ್ನು ಬಸ್ರೂರಿನ ಮೂಲಕ ಆಮದು ಮಾಡಲಾಗುತ್ತಿತ್ತು. ಚೀನಾಕ್ಕೆ ಬಸ್ರೂರಿನಿಂದ ಕಬ್ಬು ರಫ್ತು ಮಾಡಲಾಗುತ್ತಿತ್ತು.

ಶಿವಾಜಿಯ ‘ಬಸ್ರೂರು ದರೋಡೆ’ಯು ಮಹಾಶಿವರಾತ್ರಿ ದಿನದಂದು ನಡೆಯುತ್ತದೆ. (ಆಧಾರ : SIVAJIS RAID ON BASRUR By T S Shejwalkar – 1942, Page :145) ಬಸ್ರೂರು ಮಹಾಲಿಂಗೇಶ್ವರ ಜಾತ್ರೆ ಮಹಾಶಿವರಾತ್ರಿಯಂದೇ ನಡೆಯುತ್ತದೆ. ಆಗೆಲ್ಲಾ ಜಾತ್ರೆಯೆಂದರೆ ಧಾರ್ಮಿಕ ಕಾರ್ಯಕ್ರಮವಲ್ಲ. ಮಹಾಲಿಂಗೇಶ್ವರನ ತೇರು ಎಳೆಯುವ ಜಾತ್ರೆಯೆಂದರೆ ಕೃಷಿಕರ ಬದುಕಿನ ಮಹತ್ತರ ದಿನ. ಆ ದಿನ ಸಂತೆಯಲ್ಲಿ ಕೃಷಿಕರು ಬೆಳೆದಿದ್ದನ್ನು ನೇರವಾಗಿ ಮಾರಾಟ ಮಾಡುತ್ತಾರೆ. ಮೊದಲೇ ವಾಣಿಜ್ಯ ನಗರ ಬೇರೆ. ಅಂದು ರೈತರು ಮತ್ತು ವ್ಯಾಪಾರಿಗಳ ಬಳಿ ಹಣವಿರುತ್ತದೆ ಎಂದುಕೊಂಡು 1665 ರ ಫೆಬ್ರವರಿಯ ಮಹಾಶಿವರಾತ್ರಿ ದಿನ ಶಿವಾಜಿ ತನ್ನ ದರೋಡೆಕೋರ ಸೈನ್ಯದ ಜೊತೆ ದಾಳಿ ಮಾಡಿ ದೇವಸ್ಥಾನವನ್ನೂ ಸೇರಿದಂತೆ ಲೂಟಿ ಮಾಡಿದರು. ಬಸ್ರೂರಿನ ಮುಖ್ಯ ವ್ಯಾಪಾರಿ ವರ್ಗವಾಗಿದ್ದ ಜಿಎಸ್ ಬಿ (ಗೌಡ ಸಾರಸ್ವತ ಬ್ರಾಹ್ಮಣ)ರ ಮೇಲೆ ಶಿವಾಜಿ ದರೋಡೆ ಪಡೆ ಹಲ್ಲೆ ನಡೆಸಿತು. ಹಲವು ಹಿಂದೂ-ಬ್ರಾಹ್ಮಣರ ಸಾವು ನೋವುಗಳು ನಡೆದವು. ಈ ದಾಳಿಯ ಬಳಿಕ ಬಸ್ರೂರು ವ್ಯಾಪಾರ ಕೇಂದ್ರ ನೆನೆಗುದಿಗೆ ಬಿದ್ದಿತ್ತು.

ಕರಾವಳಿಯ ಮೇಲೆ ಶಿವಾಜಿ ದರೋಡೆಗಾಗಿ ದಾಳಿ ಮಾಡಿದ ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾದ ಸತ್ಯ. ಅದನ್ನು ಬಲಪಂಥೀಯರು ‘ಪೋರ್ಚುಗೀಸರ ವಾಣಿಜ್ಯ ಕೇಂದ್ರದ ಮೇಲೆ ನಡೆದ ದಾಳಿ’ ಎನ್ನುತ್ತಾರೆ. ಇದು ಅಪ್ಪಟ ಸುಳ್ಳು. ಶಿವಾಜಿಯು ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ದಾಳಿ ಮಾಡುವಾಗ ಪೋರ್ಚುಗೀಸರ ಆಡಳಿತವಿರುವ ಗೋವಾವನ್ನು ಹಾದು ಬರುತ್ತಾರೆ. ಗೋವಾದಲ್ಲಿರುವ ಪೋರ್ಚುಗೀಸರ ಮೇಲೆ ಯಾವ ದಾಳಿಯನ್ನೂ ಮಾಡಲ್ಲ. (ಆಧಾರ : SIVAJIS RAID ON BASRUR By T S Shejwalkar – 1942, Page :140)

ಆಗ ದಕ್ಷಿಣ ಕನ್ನಡದ ಬಸ್ರೂರಿನಲ್ಲಿ ಕೆಳದಿಯ ಭದ್ರಪ್ಪ ನಾಯಕ ಡಚ್ಚರೊಂದಿಗೆ ವಹಿವಾಟು ನಡೆಸುತ್ತಿದ್ದರು. ಪೋರ್ಚುಗೀಸರೂ ಕೂಡಾ ಕೆಳದಿಯವರ ಜೊತೆ ವ್ಯಾಪಾರ ವಹಿವಾಟಿಗೆ ಒಪ್ಪಂದ ಮಾಡಿದ್ದರೇ ವಿನಹ ಬಸ್ರೂರು‌ ಪೋರ್ಚುಗೀಸರ ಹಿಡಿತದಲ್ಲಿ ಇರಲಿಲ್ಲ. ಕನ್ನಡಿಗರೇ ಆದ ಕೆಳದಿಯವರ ಹಿಡಿತದಲ್ಲಿತ್ತು. ನಗ ನಾಣ್ಯಗಳ ದರೋಡೆಯ ಕಾರಣಕ್ಕಾಗಿಯೇ ಶಿವಾಜಿ ದಕ್ಷಿಣ ಕನ್ನಡ ಜಿಲ್ಲೆಗೆ ದಾಳಿ ನಡೆಸಿದರು.

ಕರಾವಳಿಯ ದೇವಸ್ಥಾನದ ಜಾತ್ರೆಗಳ ಮೇಲೆ ದಾಳಿ ನಡೆಸಿ ದರೋಡೆ ನಡೆಸಿದ ಶಿವಾಜಿಯನ್ನು ಕರಾವಳಿಯ ನೆಲದಲ್ಲಿ ಯಾರೂ ವಿಜೃಂಭಿಸಲು ಸಾಧ್ಯವಿಲ್ಲ. ಶಿವಾಜಿ ಕರಾವಳಿಯ ಪಾಲಿಗೆ ದರೋಡೆಕೋರನೇ ಹೊರತು ಹೋರಾಟಗಾರನಲ್ಲ. ನಟ ರಿಷಬ್ ಶೆಟ್ಟಿಯ ಸಿದ್ದಾಂತ ಏನಾದರೂ ಇರಲಿ, ಅವರು ಪಾತ್ರದ ಮೂಲಕ ದರೋಡೆಕೋರನನ್ನು ಹೀರೋ ಎಂದು ಬಿಂಬಿಸುವುದು ಅವರ ಹುಟ್ಟೂರಿಗೆ ಮಾಡುವ ಅವಮಾನ.

PPeepal Media Desk

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು