Saturday, January 10, 2026

ಸತ್ಯ | ನ್ಯಾಯ |ಧರ್ಮ

ವಿಪಕ್ಷಗಳ ಸಭೆ: ಮುಖ್ಯಮಂತ್ರಿ ಚಂದ್ರು ಸ್ವಾಗತ

ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಯುಪಿಎ ಒಳಗೊಂಡ ವಿಪಕ್ಷಗಳ ಸಭೆಗೆ ಆಗಮಿಸುತ್ತಿರುವ ಆಮ್ಮಿ ಪಕ್ಷದ ನಾಯಕರುಗಳನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸ್ವಾಗತಿಸಿದ್ದಾರೆ.

“ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ರವರ ದೆಹಲಿ ಸರ್ಕಾರದ ವಿರುದ್ಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ರಾಜ್ಯಸಭೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ವಿರೋಧಿಸಿರುವ ನಡೆ ಉತ್ತಮವಾದದ್ದು. ಬಿಜೆಪಿ ಪಕ್ಷದ ನಿರಂಕುಶ ಪ್ರಭುತ್ವವನ್ನು ರಾಷ್ಟ್ರದಿಂದ ಹೊಡೆದೋಡಿಸುವ ನಿಟ್ಟಿನಲ್ಲಿ ರಾಷ್ಟ್ರದ ವಿಪಕ್ಷಗಳೆಲ್ಲ ಒಂದುಗೂಡಿ ನಡೆಸುತ್ತಿರುವ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಸದಾ ಕೈ ಜೋಡಿಸುತ್ತದೆ” ಎಂದು ಮುಖ್ಯಮಂತ್ರಿ ಚಂದ್ರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.

‘ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸಭೆಯು ಈ ರಾಷ್ಟ್ರದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಂದಾಗಿ ಹೋರಾಟ ಮಾಡಿ ಮೋದಿ ಪ್ರಭುತ್ವವನ್ನು ರಾಷ್ಟ್ರದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಯಶಸ್ವಿಯಾಗಲಿದೆ’ ಎಂದು ಮುಖ್ಯಮಂತ್ರಿ ಚಂದ್ರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page