Home ದೆಹಲಿ ಹರ್ದೀಪ್ ಸಿಂಗ್ ಪುರಿ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು

ಹರ್ದೀಪ್ ಸಿಂಗ್ ಪುರಿ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು

0

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ಶುಕ್ರವಾರ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಿದರು. ಸಂಸತ್ತಿನ ಮಕರ ದ್ವಾರದ ಬಳಿ ಜಮಾಯಿಸಿದ ಸಂಸದರು, ಈ ಪ್ರಕರಣದ ಕುರಿತು ಸರ್ಕಾರದ ನಡೆಯನ್ನು ಪ್ರಶ್ನಿಸುವ ಪ್ಲಕಾರ್ಡ್‌ಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವದಾದ್ಯಂತ ಸಂಚಲನ ಮೂಡಿಸಿರುವ ‘ಎಪ್ಸ್ಟೀನ್ ಫೈಲ್ಸ್’ನಲ್ಲಿ (Epstein Files) ಹರ್ದೀಪ್ ಸಿಂಗ್ ಮತ್ತು ಉದ್ಯಮಿ ಅನಿಲ್ ಅಂಬಾನಿ ಅವರ ಹೆಸರುಗಳು ಉಲ್ಲೇಖವಾಗಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸದನದಲ್ಲಿ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಸಚಿವರ ಹೆಸರು ಕೇಳಿಬಂದರೂ ಸರ್ಕಾರ ಏಕೆ ಮೌನವಾಗಿದೆ ಮತ್ತು ಉದ್ಯಮಿ ಅನಿಲ್ ಅಂಬಾನಿ ವಿರುದ್ಧ ಕ್ರಮ ಏಕೆ ಕೈಗೊಂಡಿಲ್ಲ ಎಂದು ರಾಹುಲ್ ಪ್ರಶ್ನಿಸಿದ್ದರು.

ಈ ಆರೋಪಗಳು ಸಂಸತ್ತಿನಲ್ಲಿ ದೊಡ್ಡ ಮಟ್ಟದ ವಾಗ್ವಾದಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ಸರ್ಕಾರದಿಂದ ಸ್ಪಷ್ಟನೆಯನ್ನು ಬಯಸುತ್ತಿವೆ. ಹರ್ದೀಪ್ ಸಿಂಗ್ ಪುರಿ ಅವರು ನೈತಿಕ ಹೊಣೆ ಹೊತ್ತು ತಕ್ಷಣವೇ ಪದತ್ಯಾಗ ಮಾಡಬೇಕು ಎಂದು ಒತ್ತಾಯಿಸಿರುವ ಸಂಸದರು, ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

You cannot copy content of this page

Exit mobile version